CHITRADURGA NEWS | 26 SEPTEMBER 2025
ಚಿತ್ರದುರ್ಗ: ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಚಿತ್ರದುರ್ಗ ಜಿಲ್ಲೆ ಆಯ್ಕೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಕೇಂದ್ರ ಸರ್ಕಾರ ತನ್ನ 2025-26ರ ಕೇಂದ್ರ ಬಜೆಟ್‌ನಲ್ಲಿ 2025-26 ರಿಂದ ಪ್ರಾರಂಭಿಸಿ ಆರು ವರ್ಷಗಳ ಅವಧಿಗೆ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ (Pಒಆಆಏಙ) ಅಡಿಯಲ್ಲಿ 100 ಮಹತ್ವಾಕಾಂಕ್ಷೆಯ ಕೃಷಿ ಜಿಲ್ಲೆಗಳನ್ನು (Aspirational Agriculture District) ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿತ್ತು.
ಅದರಂತೆ ಸಚಿವ ಸಂಪುಟವು ಈ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯನ್ನು ಸೇರಿಸಿದ್ದು, 100 ಮಹತ್ವಾಕಾಂಕ್ಷೆಯ ಕೃಷಿ ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಯೋಜನೆಯು ಅಕ್ಟೋಬರ್ ತಿಂಗಳಲ್ಲಿ ಅಧಿಕೃತವಾಗಿ ಚಾಲನೆ ಪಡೆಯಲಿದೆ.
ಚಿತ್ರದುರ್ಗ ಜಿಲ್ಲೆಯನ್ನು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯಡಿ ಸೇರಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಜಿಲ್ಲೆಯ ಜನರ ಪರವಾಗಿ ಸಂಸದ ಗೋವಿಂದ ಕಾರಜೋಳ ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 26 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಈ ಯೋಜನೆಯು ದೇಶಾದ್ಯಂತ 100 ಜಿಲ್ಲೆಗಳಲ್ಲಿ 1.7 ಕೋಟಿ ರೈತರಿಗೆ ಉಪಯೋಗವಾಗಲಿದೆ. ಈ ಯೋಜನೆಯು 2025-26 ರಿಂದ 2030-31ರವರೆಗೆ ಒಟ್ಟು 6 ವರ್ಷಗಳ ಯೋಜನೆಯಾಗಿದ್ದು, ಪ್ರತೀ ವರ್ಷ 24 ಸಾವಿರ ಕೋಟಿಯಂತೆ ಒಟ್ಟು 1.44 ಲಕ್ಷ ಕೋಟಿ ಅನುದಾನವನ್ನು ಈ ಯೋಜನೆಗಾಗಿ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಭಾರತೀಯ ಕೃಷಿಯನ್ನು ರೈತರಿಗೆ ಹೆಚ್ಚು ಉತ್ಪಾದಕ, ಸುಸ್ಥಿರ ಮತ್ತು ಆರ್ಥಿಕವಾಗಿ ಲಾಭದಾಯಕವಾಗಿಸುವ ಮೂಲಕ ಕ್ರಾಂತಿಕಾರಿಗೊಳಿಸಲು ಪ್ರಾರಂಭಿಸಲಾದ ಒಂದು ಪರಿವರ್ತನಾಶೀಲ ಕಾರ್ಯಕ್ರಮವಾಗಿದೆ.
ಈ ಯೋಜನೆಯಡಿ ಕಡಿಮೆ ಬೆಳೆ, ಇಳುವರಿ, ನೀರಿನ ಕೊರತೆ ಮತ್ತು ಸಂಪನ್ಮೂಲ ಸೀಮಿತ ಪ್ರದೇಶದಂತಹ ಸವಾಲುಗಳನ್ನು ಎದುರಿಸುತ್ತಿರುವ 100 ಕಳಪೆ ಪ್ರದರ್ಶನ ನೀಡುವ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.
ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಯಿನಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಸೇರಿದಂತೆ 11 ಸಚಿವಾಲಯಗಳಲ್ಲಿ ಅಸ್ತಿತ್ವದಲ್ಲಿರುವ 36 ಕೃಷಿ ಯೋಜನೆಗಳನ್ನು ಒಟ್ಟುಗೂಡಿಸಿ, ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಬಯಸಿದೆ.
ಇದನ್ನೂ ಓದಿ: ವೇದಾವತಿ-ಅಘನಾಶಿನಿ ನದಿ ಜೋಡಣೆ ?|ಉತ್ತರ ಕನ್ನಡದಿಂದ ಬಯಲು ಸೀಮೆಗೆ 35 ಟಿಎಂಸಿ ನೀರು !
ಈ ಯೋಜನೆಯು ರೈತರ ಆದಾಯವನ್ನು ಹೆಚ್ಚಿಸಲು, ಆಹಾರ ಪದ್ದತಿಯನ್ನು ಖಚಿತ ಪಡಿಸಿಕೊಳ್ಳಲು ಮತ್ತು ಸ್ವಾವಲಂಬಿ ಭಾರತವಾದ ಆತ್ಮ ನಿರ್ಭರ ಭಾರತವನ್ನು ಮುನ್ನಡೆಸಲು ಸಹಕಾರಿಯಾಗಲಿದೆ. ಸುಸ್ಥಿರ ಕೃಷಿಯ ಮೂಲಕ ಗ್ರಾಮೀಣ ಸಮುದಾಯಗಳನ್ನು ಸಬಲೀಕರಣಗೊಳಿಸುವ ಮೂಲಕ “ಬಡತನ ಮುಕ್ತ ಭಾರತ”ವನ್ನು ಸೃಷ್ಠಿಸಲು ಈ ಯೋಜನೆ ಮೂಲಾಧಾರವಾಗಲಿದೆ ಎಂದು ಸಂಸದರು ಆಶಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
