CHITRADURGA NEWS | 01 SEPTEMBER 2026
ಚಿತ್ರದುರ್ಗ: ಮುಂದಿನ ಹಂತದಲ್ಲಿ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ತಾಲ್ಲೂಕುಗಳು ಸಹ ಕೇಂದ್ರ ನಿಯಮಾವಳಿಗಳ ಪ್ರಕಾರ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ತಮ್ಮನ್ನು ಭೇಟಿಯಾದ ಜಿಲ್ಲೆಯ ರೈತ ಮುಖಂಡರೊಂದಿಗೆ ಈ ಕುರಿತು ಚರ್ಚಿಸಿದರು.
ಬರ ಘೋಷಣೆ ವಿಚಾರದಲ್ಲಿ ಸಾರ್ವಜನಿಕರು ಹಾಗೂ ರೈತರಲ್ಲಿ ಇರುವ ಗೊಂದಲಗಳಿಗೆ ತೆರೆ ಎಳೆದ ಸಚಿವರು, ಬರ ಘೋಷಣೆ ಮಾಡುವುದು ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ, ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ 2020’ ರ ಮಾರ್ಗದರ್ಶಿ ಸೂತ್ರಗಳನ್ನು ಆಧರಿಸಿ ರೂಪಿಸಿರುವ ಮಾನದಂಡಗಳ ಆಧಾರದ ಮೇಲೆ ಬರ ನಿರ್ಧಾರವಾಗುತ್ತದೆ ಎಂದರು.
ಬರಪೀಡಿತ ಎಂದು ಘೋಷಿಸಲು ಮೊದಲನೆಯದಾಗಿ ಶೇ 60ಕ್ಕಿಂತ ಹೆಚ್ಚಿನ ಮಳೆ ಕೊರತೆ ಇರಬೇಕು. ಸತತ ಮೂರು ವಾರಗಳ ಕಾಲ ಶುಷ್ಕ ವಾತಾವರಣ ಇರಬೇಕು. ಈ ಹಿಂದೆ ಪಟ್ಟಿ ಘೋಷಿಸುವಾಗ ಜೂನ್ನಿಂದ ಆಗಸ್ಟ್ 12ರವರೆಗಿನ ಅವಧಿಯಲ್ಲಿ ಸತತ ಮೂರು ವಾರಗಳ ಕಾಲ ಮಳೆಯಾಗದೆ ಶುಷ್ಕ ಅವಧಿ ಇದ್ದ ತಾಲ್ಲೂಕುಗಳನ್ನು ಮಾತ್ರ ಪರಿಗಣಿಸಲಾಗಿತ್ತು.
ಇದನ್ನೂ ಓದಿ: ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
ಬರ ಪಟ್ಟಿ ಘೋಷಣೆಯಲ್ಲಿ ಯಾವುದೇ ರಾಜಕೀಯ ಪಕ್ಷಪಾತವಾಗಲಿ ಅಥವಾ ಅಧಿಕಾರಿಗಳ ನಿರ್ಲಕ್ಷ್ಯವಾಗಲಿ ನಡೆದಿಲ್ಲ. ಯಾವುದೇ ರಾಜಯಕೀಯ ಲಾಭಕ್ಕಾಗಿ ತಾಲ್ಲೂಕುಗಳನ್ನು ಪಟ್ಟಿಗೆ ಸೇರ್ಪಡೆ ಮಾಡಲು ಆಗುವುದಿಲ್ಲ. ಇವೆಲ್ಲಾ ಉಹಾಪೋಹದ ಮಾತುಗಳು. ರೈತರು ಇವುಗಳಿಗೆ ಕಿವಿಗೊಡಬಾರದು ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.
ರಾಜ್ಯದ 25 ಜಿಲ್ಲೆಗಳ 175 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದು, ಕೇಂದ್ರ ಸರ್ಕಾರದ ಮಾನದಂಡಗಳಡಿ 101 ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಇದರಲ್ಲಿ 89 ತಾಲ್ಲೂಕುಗಳಲ್ಲಿ ತೀವ್ರ ಹಾಗೂ 12 ತಾಲ್ಲೂಕುಗಳಲ್ಲಿ ಸಾಧಾರಣ ಬರ ಪರಸ್ಥಿತಿ ತಲೆದೊರಿದೆ.
ಜಿಲ್ಲೆಯ ಬಿಟ್ಟುಹೋಗಿರುವ ಮೂರು ತಾಲ್ಲೂಕುಗಳಲ್ಲಿಯೂ ಸಹ ಶುಷ್ಕವಾತಾರಣ ದಾಖಲಾಗಿದೆ. ಈ ಬಗ್ಗೆ ‘ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ’ ವರದಿ ನೀಡಲಾಗಿದೆ. ನಿಯಮಾವಳಿಗಳ ಪ್ರಕಾರ ಶೀಘ್ರದಲ್ಲೇ ಬರ ಪೀಡತ ತಾಲ್ಲೂಕುಗಳು ಎಂದು ಘೋಷಿಸಲಾಗುವುದು ಎಂದು ಸಚಿವ ಟಿ.ರಘೂಮೂರ್ತಿ ಪುರುಚ್ಛರಿಸಿದರು.
ಇದನ್ನೂ ಓದಿ: ರುಡ್ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
ಈ ವೇಳೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಿಕಟಪೂರ್ವ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ, ರೈತ ಮುಖಂಡರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

