CHITRADURGA NEWS | 26 NOVEMBER 2024
ಚಿತ್ರದುರ್ಗ: ಹರಿಹರದಲ್ಲಿ ನ.23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿ ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ(Lawyers) ತಂಡ ವಕೀಲರ ಭವನದಲ್ಲಿ ಸೋಮವಾರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಿಗೆ ಟ್ರೋಪಿಯನ್ನು ಸಮರ್ಪಿಸಿತು.

ಕ್ಲಿಕ್ ಮಾಡಿ ಓದಿ: ವಿದ್ಯುತ್ ಟ್ರಾನ್ಸ್‍ಫಾರ್ಮರ್ ರಿಪೇರಿಗೆ ದುಡ್ಡು ಕೊಡಬೇಡಿ | ಬೆಸ್ಕಾಂ ಸೂಚನೆ
ಟ್ರೋಫಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರುಗಳಲ್ಲಿ ಕ್ರೀಡಾ ಮನೋಭಾವ ಇಮ್ಮಡಿಯಾಗಬೇಕು. ಹರಿಹರದಲ್ಲಿ ನಡೆದ ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ನಮ್ಮ ವಕೀಲರು ಟ್ರೋಫಿ ಗೆದ್ದಿರುವುದು ಅತ್ಯಂತ ಸಂತೋಷವಾಗಿದೆ.
ಮುಂದಿನ ದಿನಗಳಲ್ಲಿ ಚಿತ್ರದುರ್ಗದಲ್ಲಿ ಅಂತರ್ ಜಿಲ್ಲಾ ಕ್ರಿಕೆಟ್ ಟೂರ್ನಿ ನಡೆಸುವ ಚಿಂತನೆಯಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರಬೇಕೆಂದು ವಕೀಲರುಗಳಲ್ಲಿ ವಿನಂತಿಸಿದರು.
ಹಿರಿಯ ನ್ಯಾಯವಾದಿ ಎಚ್.ಎಂ.ಎಸ್.ನಾಯಕ ಮಾತನಾಡಿ, ನಮ್ಮ ವಕೀಲರು ಟ್ರೋಫಿ ತರುವ ಮೂಲಕ ವಕೀಲರ ಸಂಘಕ್ಕೆ ಗೌರವ ತಂದುಕೊಟ್ಟಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಚಾಣಾಕ್ಷತನ ಮುಖ್ಯ. ಸೋಲಿನಿಂದ ಗೆಲ್ಲಬೇಕೆಂಬ ಸ್ಪೂರ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: ಹಿರಿಯೂರು | ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕರೆಂಟ್ ಇರಲ್ಲ
ನ್ಯಾಯವಾದಿ ರಿಜ್ವಾನ್ ಮಾತನಾಡಿ, ವಕೀಲರ ಸಂಘ ಹರಿಹರದಲ್ಲಿ ನಡೆದ ಟೂರ್ನಿಯಲ್ಲಿ ಟ್ರೋಫಿ ಗೆದ್ದಿರುವುದು ಸಂತಸವಾಗಿದೆ. ಚಿತ್ರದುರ್ಗದಲ್ಲಿ ಅಂತರ್ ಜಿಲ್ಲಾ ಟೂರ್ನಮೆಂಟ್ ನಡೆಸಿ ಎಂದು ವಕೀಲರ ಸಂಘಕ್ಕೆ ಸಲಹೆ ನೀಡಿದರು.
ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಉಪಾಧ್ಯಕ್ಷ ಬಿ.ಎಂ.ಅನಿಲ್‍ಕುಮಾರ್, ವಕೀಲರುಗಳಾದ ಹನುಮಂತಪ್ಪ, ಮೂರ್ತಿ, ಲೋಕೇಶ್, ಪಿ.ಆರ್.ವೀರೇಶ್, ಅಶೋಕ್, ಶಿವಕುಮಾರ್ ಸೇರಿದಂತೆ ವಕೀಲರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
