
ಚಿತ್ರದುರ್ಗ ನ್ಯೂಸ್.ಕಾಂ
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖ್ಯವಲ್ಲ. ಪಕ್ಷದ ಗೆಲುವು ಮಾತ್ರ ಮುಖ್ಯ. ಈ ಉದ್ದೇಶದಿಂದ ಪಕ್ಷವನ್ನು ಪುನಃ ತಳಮಟ್ಟದಿಂದ ಸಂಘಟಿಸುವ ಕಾರ್ಯ ನಡೆಯುತ್ತಿದೆ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 7ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜತೆಗೆ ಪಕ್ಷದ ಹೈಕಮಾಂಡ್ ಜಿಲ್ಲೆಯ ಮೂವರಿಗೆ ಪದಾಧಿಕಾರಿಗಳ ಹುದ್ದೆ ನೀಡಿದೆ. ಮುಂಬರುವ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಬೇಕು’ ಎಂದರು.
‘ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 136 ಸ್ಥಾನ ಬಂದ ಹಿನ್ನೆಲೆಯಲ್ಲಿ ಅದರ ಪ್ರಭಾವ ತೆಲಂಗಾಣದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜ್ಯದ ಜನರ ಮೇಲೆ ಜವಾಬ್ದಾರಿ ಇದೆ. ನಾಗಪುರ ಆರ್‌ಎಸ್‌ಎಸ್ ಕೇಂದ್ರ ಸ್ಥಾನವಾಗಿದ್ದರು ಸಹ ಅಲ್ಲಿ ನಡೆದ ಎಐಸಿಸಿ ಸಂಸ್ಥಾಪನಾ ದಿನಾಚರಣೆ ನಿರೀಕ್ಷೆ ಮೀರಿ ಯಶಸ್ಸು ಕಂಡಿತು. ಜನರಿಗೆ ಎಲ್ಲವೂ ಅರ್ಥವಾಗುತ್ತಿದೆ’ ಎಂದು ತಿಳಿಸಿದರು.
ಇದನ್ನೂ ಓದಿ: ವಿರೋಧ ಮಾಡಿದವರು ಕಾಂಗ್ರೆಸ್ ಕಾರ್ಯಕರ್ತರಲ್ಲ; ಬಿ.ಎನ್.ಚಂದ್ರಪ್ಪ
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ‘2023 ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟ ವರ್ಷ. ಬಿಜೆಪಿ ಆಡಳಿತ ವೈಫಲ್ಯ, ಅಭದ್ರತೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಆಡಳಿತದಿಂದ ಜನರು ಬೇಸತ್ತು ಕಾಂಗ್ರೆಸ್ಸಿಗೆ ಸ್ಪಷ್ಟ ಜನಾದೇಶ ನೀಡಿದ್ದರು. ಚುನಾವಣೆ ಭರವಸೆಯಂತೆ ಐದು ಗ್ಯಾರೆಂಟಿ ಜಾರಿ ಮಾಡುವ ಮೂಲಕ ಬಡವರ ಪರ ಇರುವ ಸರ್ಕಾರ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದೇವೆ’ ಎಂದರು.
‘ಬಿಜೆಪಿಯವರು ಗ್ಯಾರೆಂಟಿಗಳಿಂದ ಕರ್ನಾಟಕ ಪಾಕಿಸ್ತಾನ ಆಗುತ್ತದೆ ಎನ್ನುವ ಆರೋಪ ಮಾಡಿದ್ದರು. ಆದರೆ, 14 ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಆರ್ಥಿಕ ತಜ್ಞ, ಅವರು ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ’ ಎಂದು ತಿಳಿಸಿದರು.
‘ಬಿಜೆಪಿ 2014 ರಲ್ಲಿ ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆಪಾದನೆ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆಯಿತು. ಈವರೆಗೆ ಯಾವುದೇ ಬೆಲೆ ನಿಯಂತ್ರಣ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಬಡವರ ಕಷ್ಟ ಅರಿತು, ಎಲ್ಲರ ಮನೆಗಳಿಗೆ ಉಚಿತ ವಿದ್ಯುತ್, ಅಕ್ಕಿ, ನಿರುದ್ಯೋಗಿಗಳಿಗೆ ಯುವನಿಧಿ, ಗೃಹಲಕ್ಷ್ಮೀ ಯೋಜನೆ ಕೊಟ್ಟಿದ್ದೇವೆ’ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಾಜ್‌ಪೀರ್, ಮುಖಂಡರಾದ ಮೈಲಾರಪ್ಪ, ಸಂಪತ್ ಕುಮಾರ್, ಎನ್.ಡಿ.ಕುಮಾರ್, ಪ್ರಕಾಶ್ ರಾಮನಾಯ್ಕ್, ಲಕ್ಷ್ಮೀಕಾಂತ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
