ಮುಖ್ಯ ಸುದ್ದಿ
Chitradurga Lok Sabha Election Results 2024 LIVE: ಲೋಕಸಭಾ ಚುನಾವಣೆ, ಸ್ಟ್ರಾಂಗ್ ರೂಮ್ ಓಪನ್
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಬಿ.ಡಿ.ರಸ್ತೆಯ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಯುತ್ತಿದೆ. ಮಧ್ಯಾಹ್ನ 12.30ರ ಹೊತ್ತಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಏ.26ರಂದು ಮತದಾನ ನಡೆದಿದ್ದು, 39 ದಿನಗಳ ಸುದೀರ್ಘ ಕುತೂಹಲಕ್ಕೆ ತೆರೆಬೀಳಲಿದೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.