ಮುಖ್ಯ ಸುದ್ದಿ
ಚಿತ್ರದುರ್ಗ ಲೋಕಸಭಾ ಫಲಿತಾಂಶ | ಎರಡನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆ

Published on
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎರಡನೇ ಸುತ್ತಿನಲ್ಲಿ ಬಿಜೆಪಿ 3341 ಮತಗಳ ಮುನ್ನಡೆ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 67985 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಗೆ 64644 ಮತ ಪಡೆದಿದ್ದಾರೆ.
ಮಧ್ಯಾಹ್ನ 12.30ರ ಹೊತ್ತಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಏ.26ರಂದು ಮತದಾನ ನಡೆದಿದ್ದು, 39 ದಿನಗಳ ಸುದೀರ್ಘ ಕುತೂಹಲಕ್ಕೆ ತೆರೆಬೀಳಲಿದೆ. ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಯಾರ ಕೊರಳನ್ನು ಅಲಂಕರಿಸಲಿದೆ ಎಂಬ ಕುತೂಹಲ ಮೂಡಿದೆ.

Continue Reading

Click to comment