ಮುಖ್ಯ ಸುದ್ದಿ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆಯಲ್ಲಿ ಜನತಾ ದರ್ಶನ
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ(ಪಪ್ಪಿ) ಅವರ ಅಧ್ಯಕ್ಷತೆ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ನೇತೃತ್ವದಲ್ಲಿ ಅ.4 ಬುಧವಾರ ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ
ಚಿತ್ರದುರ್ಗ ತಾಲ್ಲೂಕಿಗೆ ಸಂಬಂಧಿಸಿದಂತೆ ಜನಪ್ರತಿನಿದಿಗಳು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಜನತಾ ದರ್ಶನದಲ್ಲಿ ಭಾಗವಹಿಸಲಿದ್ದಾರೆ.
ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನತಾ ದರ್ಶನದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲ್ಲೂಕು ತಹಶೀಲ್ದಾರ್ ಡಾ.ನಾಗವೇಣಿ ಕೋರಿದ್ದಾರೆ.