CHITRADURGA NEWS | 26 NOVEMBER 2026
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಆಯ-ವ್ಯಯ ತಯಾರಿಕೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ನಗರ ಸಭೆ ಆಡಳಿತಾಧಿಕಾರಿ ಎಸ್.ರಮ್ಯಾ ಅವರ ಉಪಸ್ಥಿತಿಯಲ್ಲಿ ನ.30 ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.
ಇದನ್ನೂ ಓದಿ: ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅಭಿವೃದ್ಧಿ ಯೋಜನೆಗಳ ಕುರಿತು ನಗರದ ಗಣ್ಯವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು,ನೌಕರರು, ಪತ್ರಕರ್ತರು, ಹಿರಿಯ ನಾಗರೀಕರು, ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ಸಭೆಯಲ್ಲಿ ಭಾಗವಹಿಸಿ ಅಥವಾ ಲಿಖಿತ ರೂಪದಲ್ಲಿ ಕಛೇರಿ ವೇಳೆಯಲ್ಲಿ ನೀಡಬಹುದು ಎಂದು ಪೌರಾಯುಕ್ತೆ ಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
