
ಚಿತ್ರದುರ್ಗ ನ್ಯೂಸ್. ಕಾಂ:
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿರುವ 63 ರಾಷ್ಟ್ರೀಯ ರೈಫಲ್ಸ್‍ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ನಗರದ ಸರಕಾರಿ ಕಲಾ ಕಾಲೇಜು ಆವರಣದಲ್ಲಿ ಎನ್‍ಸಿಸಿ ಘಟಕದಿಂದ ಶನಿವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕ್ಯಾ.ಎಂ.ವಿ.ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಸರ್ಕಾರಿ ಕಲಾ ಕಾಲೇಜು NCC ಲೆಫ್ಟಿನೆಂಟ್ ಅಧಿಕಾರಿ ಡಾ.ಸ.ರಾ.ಲೇಪಾಕ್ಷ ಮಾತನಾಡಿ, ಮನೆಯಲ್ಲಿ ನಾಲ್ಕೈದು ಮಕ್ಕಳಿದ್ದರೂ ಸೇನೆಗೆ ಸೇರಲು ಹೆದರಿಕೆಯಿಂದ ಹಿಂದೆ ಮುಂದೆ ನೋಡುತ್ತೇವೆ. ಆದರೆ ಪ್ರಾಂಜಲ್ ಪೋಷಕರು ಉನ್ನತ ಹುದ್ದೆಯಲ್ಲಿದ್ದರೂ ಸೇನೆಗೆ ಕಳುಹಿಸಿರುತ್ತಾರೆ. ಸೇನೆಗೆ ಹೋಗುವುದು ಹೊಟ್ಟೆಪಾಡಿಗಾಗಿ, ಉದ್ಯೋಗಕ್ಕೆ ಎಂದು ಕೆಲವರು ಮಾತನಾಡುತ್ತಾರೆ. ಆದರೆ ಪ್ರಾಂಜಲ್ ರವರು ಚಿಕ್ಕ ವಯಸ್ಸಿನಲ್ಲೇ ಸೇನೆ ಅಧಿಕಾರಿಯಾಗಿ 29 ವಯಸ್ಸಿನಲ್ಲಿ ವೀರ ಮರಣವನ್ನಪ್ಪಿದ್ದಾರೆ ಎಂದರು.


ಸೇನೆಯ ಸೇವೆ ರಾಷ್ಟ್ರದ ಸೇವೆ ಎಂಬ ಅಭಿಮಾನದಿಂದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರು ಸೇನೆಗೆ ಸೇರಿ ದೇಶಕ್ಕಾಗಿ ವೀರ ಮರಣವನ್ನಪ್ಪಿದ್ದಾರೆ. ಪ್ರತಿಯೊಬ್ಬರಲ್ಲೂ ನನ್ನ ರಾಷ್ಟ್ರ ಎಂಬ ಅಭಿಮಾನ ಮೂಡಬೇಕು. ದೇಶ ನನ್ನದು ಎಂಬ ಚಿಂತನೆ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ಪ್ರಭಾರ ಪ್ರಾಚಾರ್ಯ ಪ್ರೊ.ಎಲ್.ನಾಗರಾಜಪ್ಪ ಮಾತನಾಡಿ, ಎಂತಹ ಸಂದರ್ಭ ಬಂದರೂ ನಮ್ಮ ನಾಡು, ದೇಶ, ಜನತೆಗೆ ರಕ್ಷಣೆಗೆ ನಮ್ಮ ಜೀವನ ಮುಡಿಪಾಗಿಡಬೇಕು. ಹುತಾತ್ಮ ಕ್ಯಾ.ಎಂ.ವಿ.ಪ್ರಾಂಜಲ್ ಅವರಂತೆ ಧೈರ್ಯ ಮೆರೆಯಬೇಕು, ಸಾವಿಗೆ ಅಂಜಿಕೆ, ಭಯ ಪಡಬಾರದು. ಯುವಕರು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ನ್ಯಾಯವಾದಿ ಓ.ಪ್ರತಾಪ್‍ಜೋಗಿ ಮಾತನಾಡಿ, ಕ್ಯಾ.ಪ್ರಾಂಜಲ್ ಅಂತಹ ಸಾವಿರಾರು ಯುವಕರು ಚಿಕ್ಕ ವಯಸ್ಸಿನಲ್ಲಿ ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವುದು ದೇಶ ಹೆಮ್ಮೆ ಪಡುವ ವಿಷಯ. ಎನ್‍ಸಿಸಿ, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇನೆಗೆ ಸೇರುವ ಮೂಲಕ ದೇಶ ಸೇವೆಗೆ ಮುಂದಾಗಬೇಕು ಎಂದರು.
ಕ್ಯಾ.ಎಂ.ವಿ.ಪ್ರಾಂಜಲ್ ನಿಧನಕ್ಕೆ ಒಂದು ನಿಮಿಷ ಮೌನಾಚರಿಸಲಾಯಿತು. ಪ್ರಾಧ್ಯಾಪಕರಾದ ಡಾ.ತಾರಿಣಿ ಶುಭದಾಯಿನಿ, ಡಾ.ಪಿ.ಎಸ್.ಗಂಗಾಧರ್, ಐಕ್ಯುಎಸಿ ಸಂಚಾಲಕ ಪ್ರೊ.ಜಿ.ಡಿ.ಸುರೇಶ್, ಪ್ರೊ.ಆರ್.ಗಂಗಾಧರ್, ಪ್ರೊ.ಕೆ.ಎಲ್.ಶ್ರೀನಿವಾಸ್, ಪ್ರೊ.ನಯಾಜ್, ವೆಂಕಟೇಶ್, ಎನ್‍ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
