ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ನಿಯೋಜನೆ ಮಾಡಿ ರಾಜ್ಯ ಸರ್ಕಾರ ಸೋಮವಾರ ರಾತ್ರಿ ಆದೇಶಿಸಿದೆ.
ಈವರೆಗೆ ಚಿತ್ರದುರ್ಗ ಎಸ್ಪಿ ಆಗಿದ್ದ ಕೆ.ಪರಶುರಾಮ್ ಅವರ ಜಾಗಕ್ಕೆ ಧರ್ಮೇಂದರ್ ಕುಮಾರ್ ಮೀನಾ ಬಂದಿದ್ದಾರೆ. ಪರಶುರಾಮ್ ಅವರಿಗೆ ಇನ್ನೂ ಸ್ಥಳ ನಿಯೋಜನೆ ಮಾಡಿಲ್ಲ.
ಇದನ್ನು ಓದಿ: ಉಪಹಾರದಲ್ಲಿ ಜಿರಳೆ, ತಡರಾತ್ರಿ ಕವಾಡಿಗರಹಟ್ಟಿ ನಿವಾಸಿಗಳ ಪ್ರತಿಭಟನೆ; ಚಿತ್ರದುರ್ಗ ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಈ ಹಿಂದೆ ಚಾಮರಾಜನಗರದ ಎಸ್ಪಿ, ಬೆಂಗಳೂರು ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಇನ್ನು ಮುಂದೆ ಚಿತ್ರದುರ್ಗ ಎಸ್ಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
