ಮುಖ್ಯ ಸುದ್ದಿ
ಮೇ.2 ರಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ
CHITRADURGA NEWS | 24 APRIL 2025
ಚಿತ್ರದುರ್ಗ: ತಾಲ್ಲೂಕು ಪಂಚಾಯತ್ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಮೇ 02 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
Also Read: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅಧ್ಯಕ್ಷತೆಯಲ್ಲಿ ಮತ್ತು ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರ ಉಪಸ್ಥಿತಿಯಲ್ಲಿ ಸಭೆ ನಿಗದಿಪಡಿಸಲಾಗಿದೆ.
ಸಭೆಯಲ್ಲಿ ವಿವಿಧ ಇಲಾಖೆಗಳ ಕಳೆದ ಮಾರ್ಚ್ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.