By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    12 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    15 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    15 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    15 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    19 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    59 minutes ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದ ಚಿತ್ರದುರ್ಗ | ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೋಡುಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದ ಚಿತ್ರದುರ್ಗ | ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೋಡುಗೆ

News Desk Chitradurga News
Last updated: 10 February 2024 15:53
News Desk Chitradurga News
2 years ago
Share
SHARE

CHITRADURGA NEWS | 10 FEBRUARY 2024
ಚಿತ್ರದುರ್ಗ: ಕೋಟೆನಾಡಿನ ಶುಕ್ರವಾರದ ರಾತ್ರಿ 7.30 ರ ಸಮಯ ಎಂದಿನಂತೆ ಇರಲಿಲ್ಲ. ಭಾವುಕತೆ, ಸಂಭ್ರಮ, ಸಂಭ್ರಮದ ನೋವಿನಲ್ಲಿ ಭಾರವಾದ ಮನಸ್ಸುಗಳು, ಜಯ ಘೋಷ, ಶಿಳ್ಳೆ, ಚಪ್ಪಾಳೆ, ಆನಂದ ಭಾಷ್ಪ..ಹೀಗೆ ಎಲ್ಲದರ ಸಮ್ಮಿಶ್ರಣದ ವಾತಾವರಣಕ್ಕೆ ತರಾಸು ರಂಗಮಂದಿರ ಸಾಕ್ಷಿಯಾಯಿತು.

2022 ಅಕ್ಟೋಬರ್‌ನಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದ ಇವರು 2024 ರ ಜನವರಿ 23 ರವರೆಗೆ ಕರ್ತವ್ಯ ನಿರ್ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ ಅವರು ಮಾಡಿದ ಜನಪರ ಕಾರ್ಯ ಅವಿಸ್ಮರಣೀಯ. ಅತ್ಯಂತ ಕಡಿಮೆ ಅವಧಿಯಲ್ಲಿ ಕೋಟೆನಾಡಿನ ಜನರ ಹೃದಯ ಸಿಂಹಾಸನ ಅಲಂಕರಿಸಿದ್ದಾರೆ ಎಂಬುದನ್ನು ತರಾಸು ರಂಗಮಂದಿರಕ್ಕೆ ಆಗಮಿಸಿದ್ದ ಜನಸ್ತೋಮ ಸಾಕ್ಷೀಕರಿಸಿತು.

ತಮಿಳುನಾಡು ಮೂಲದ ದಿವ್ಯಪ್ರಭು ಜಿ.ಆರ್‌.ಜೆ ಅವರು 2014ನೇ ಸಾಲಿನ ಐಎಎಸ್‌ ಬ್ಯಾಚ್‌ನ ಅಧಿಕಾರಿ. ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಲಿಂಗಸಗೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿದ ಇವರು, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಹಾಗೂ 2022 ಅಕ್ಟೋಬರ್‌ನಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದ ಇವರು 2024 ರ ಜನವರಿ 23 ರವರೆಗೆ ಕರ್ತವ್ಯ ನಿರ್ವಹಿಸಿ ಧಾರವಾಡ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಗೊಂಡಿದ್ದಾರೆ. ಈಗಾಗಲೇ ಧಾರವಾಡದಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ದಿವ್ಯಪ್ರಭು ಜಿ.ಆರ್‌.ಜೆ ಅವರಿಗೆ ಚಿತ್ರದುರ್ಗ ನಾಗರೀಕ ವೇದಿಕೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ನೀಡಿತು.

ಇದನ್ನೂ ಓದಿ: ಇನ್ನು ಮುಂದೆ ಚಿತ್ರದುರ್ಗ ನನ್ನ ತವರು ಮನೆ | ದುರ್ಗದ ಜನರ ಪ್ರೀತಿಗೆ ಭಾವುಕರಾದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತೆ ವಿ.ವಿ.ಜೋತ್ಸ್ನಾ ಮಾತನಾಡಿ, ಐದು ವರ್ಷಗಳ ಹಿಂದೆ ನಾನು ಕೂಡ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ಈಗಲೂ ಜಿಲ್ಲೆಯ ಜನ ನನ್ನ ಮೇಲಿಟ್ಟಿರುವ ಅಭಿಮಾನ ಪ್ರೀತಿ ಮರೆಯುವುದಿಲ್ಲ. ಇಲ್ಲಿ ಕೆಲಸ ಮಾಡುವಾಗ ಎಲ್ಲರ ಸಹಕಾರ ಸಿಕ್ಕಿದೆ ಎಂದು ತಿಳಿಸಿದ ಅವರು, ದಿವ್ಯಪ್ರಭು ಜಿ.ಆರ್.ಜೆ ಅವರು ನೋಡಲು ಮೃದುವಾಗಿರಬಹುದು. ಆದರೆ ಅವರು ಕೆಲವೊಮ್ಮೆ ತೆಗೆದುಕೊಳ್ಳುವ ನಿರ್ಧಾರಗಳು ಕಠಿಣ ದಿಟ್ಟವಾಗಿರುತ್ತಿದ್ದವು ಎಂದು ತಿಳಿಸಿದರು.

ಇದನ್ನೂ ಓದಿ: 2024ಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಯಾಕೆ ? | ಆಟೋ ಪ್ರಚಾರಕ್ಕೆ ಚಾಲನೆ

ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸನ್ಮಾನ ಸ್ವೀಕರಿಸಿ ಮಾತನಾಡಿ, 15 ವರ್ಷಗಳ ಹಿಂದೆ ಚಿತ್ರದುರ್ಗದಲ್ಲಿ ಉಪವಿಭಾಗಾಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ಇದೀಗ ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗಕ್ಕೆ ಸರ್ಕಾರ ವರ್ಗಾಯಿಸಿ ಎರಡನೇ ಬಾರಿಗೆ ಇಲ್ಲಿ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿದೆ ಎಂದು ತಿಳಿಸಿದ ಅವರು, ದಿವ್ಯಪ್ರಭು ಜಿ.ಆರ್.ಜೆ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಎಲ್ಲರ ಅಭಿಮಾನ, ಮೆಚ್ಚುಗೆ ಗಳಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂದು ತಿಳಿದು ಚಾಚೂ ತಪ್ಪದೇ ಪಾಲಿಸಿಕೊಂಡು ಬಂದ ದಿವ್ಯಪ್ರಭು ಜಿ.ಆರ್.ಜೆ. ಅವರು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ, ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಕವಾಡಿಗರಹಟ್ಟಿ ಪ್ರಕರಣದಲ್ಲಿ ಸಮರ್ಥವಾಗಿ ಕರ್ತವ್ಯ ನಿಭಾಯಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನ ಅಲಂಕರಿಸಲು ಕಾರಣರಾಗಿದ್ದಾರೆ. ಜೊತೆಗೆ ರಾಷ್ಟ್ರಪತಿಗಳಿಂದ ರಾಷ್ಟ್ರಮಟ್ಟದ ಎರಡು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮುಂದೆಯೂ ಜನಸೇವೆ ಮಾಡಿ ಉತ್ತಮ ಹೆಸರು ಗಳಿಸಲಿ ಎಂದು ಶುಭ ಹಾರೈಸಿದರು.

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ದಿವ್ಯಪ್ರಭು ಧೀರ, ದಿಟ್ಟ ಮಹಿಳೆ. ಸುಸಂಸ್ಕøತ ಕುಟುಂಬದಿಂದ ಬಂದವರು. ಮೊದಲಿಗೆ ಐ.ಎಫ್.ಎಸ್. ಅಧಿಕಾರಿಯಾಗಿ ಆಯ್ಕೆಯಾಗಿ ಅಷ್ಟಕ್ಕೆ ತೃಪ್ತಿಪಟ್ಟುಕೊಳ್ಳದೆ ಛಲವಿಟ್ಟು ಐ.ಎ.ಎಸ್. ಪಾಸ್ ಆಗಿ ರಾಜ್ಯದ ಅನೇಕ ಕಡೆ ಕೆಲಸ ಮಾಡಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಧಾರವಾಡಕ್ಕೆ ವರ್ಗಾವಣೆಯಾಗಿದ್ದಾರೆ. ಅಲ್ಲಿಯೂ ಅವರ ಸೇವೆ ಜನರಿಗೆ ಸಿಗಲಿ. ಮಹಿಳೆ ಮನಸ್ಸು ಮಾಡಿದರೆ ಏನಾದರೂ ಸಾಧಿಸಬಹುದು ಎನ್ನುವುದಕ್ಕೆ ದಿವ್ಯಪ್ರಭುರವರೆ ಕಣ್ಣ ಮುಂದೆ ಇದ್ದಾರೆಂದು ಬಣ್ಣಿಸಿದರು.

ಇದನ್ನೂ ಓದಿ: ಅವೈಜ್ಞಾನಿಕ ರಸ್ತೆ ವಿಭಜಕ ತೆರವಿಗೆ ಚಾಲನೆ | ಜೆಸಿಬಿ, ಹಿಟಾಚಿ ಜತೆ ಪಟಾಕಿ ಸದ್ದು

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಅಧಿಕಾರಿಗಳಾದ ಮೇಲೆ ಸರ್ಕಾರ ಹೇಳಿದ ಜಾಗಕ್ಕೆ ಹೋಗಿ ಕೆಲಸ ಮಾಡುವುದು ಅನಿವಾರ್ಯ. ದಿವ್ಯಪ್ರಭು ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿ ಧಾರವಾಡಕ್ಕೆ ವರ್ಗಾವಣೆಯಾಗಿದ್ದರೂ ಚಿತ್ರದುರ್ಗ ನಾಗರೀಕ ವೇದಿಕೆಯಿಂದ ಇಷ್ಟೊಂದು ಅದ್ದೂರಿಯಾಗಿ ಬೀಳ್ಕೊಡುಗೆ ನೀಡಿರುವುದು ಹೃದಯಸ್ಪರ್ಶಿಯಾಗಿದೆ. ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ರವರಿಂದ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದೇವೆ. ಹಿಂದುಳಿದ ಬರಪೀಡಿತ ಬಡ ಜಿಲ್ಲೆಯ ಅಭಿವೃದ್ಧಿ ಕಡೆ ಗಮನ ಕೊಟ್ಟು ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ದಿವ್ಯಪ್ರಭು ಜಿ.ಆರ್‌.ಜೆ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಾಗಿದ್ದಾಗ ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿ ಮತ್ತು ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಇವರ ನೇತೃತ್ವದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕು ಉತ್ತಮ ಸಾಧನೆ ಮಾಡಿದ್ದು ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ, ಮರ್ಚೆಂಟ್ಸ್ ಸೌಹಾರ್ಧ ಸಹಕಾರ ಬ್ಯಾಂಕ್ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ಮುಖಂಡರಾದ ಬಿ.ಎ.ಲಿಂಗಾರೆಡ್ಡಿ, ಎಂ.ಕೆ.ತಾಜ್‍ಪೀರ್ ಸೇರಿದಂತೆ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:eveningFarewellheart touchingtarasutheatreತರಾಸುಬೀಳ್ಕೋಡುಗೆರಂಗಮಂದಿರಸಂಜೆಹೃದಯ ಸ್ಪರ್ಶಿ
Share This Article
Facebook Email Print
Previous Article ಇನ್ನು ಮುಂದೆ ಚಿತ್ರದುರ್ಗ ನನ್ನ ತವರು ಮನೆ | ದುರ್ಗದ ಜನರ ಪ್ರೀತಿಗೆ ಭಾವುಕರಾದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ.
Next Article ಯಾದವ ಸಮುದಾಯಕ್ಕೆ ಸದಾ ಸಹಕಾರ | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಭರವಸೆ
Leave a Comment

Leave a Reply Cancel reply

Your email address will not be published. Required fields are marked *

Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up