
CHITRADURGA NEWS | 16 JANUARY 2026
ಚಳ್ಳಕೆರೆ: ತಾಲ್ಲೂಕಿನ ರಾಮಸಾಗರ ಸರ್ಕಾರಿ ಶಾಲೆಯ ಶಿಕ್ಷಕ ಚೌಳೂರು ಲೋಕೇಶ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪಿ.ಹೆಚ್.ಡಿ ಪದವಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಮುರುಘಾ ಮಠ ಕುರಿತ ಪ್ರಬಂಧಕ್ಕೆ ಉಷಾಗೆ Phd

ಹೊಳೆನರಸೀಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಾದಯ್ಯ ಮಾಕನಹಳ್ಳಿ ಅವರ ಮಾರ್ಗದರ್ಶನದಲ್ಲಿ ಸಾದರ ಪಡಿಸಿದ ಚಳ್ಳಕೆರೆ ಜಾನಪದ ಎನ್ನುವ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿದೆ.
ಫೆಬ್ರವರಿ ತಿಂಗಳಲ್ಲಿ ಜರುಗಲಿರುವ 34 ನೇ ನುಡಿಹಬ್ಬದಲ್ಲಿ ರಾಜ್ಯಪಾಲರಿಂದ ಪದವಿ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:
ಶಿಕ್ಷಕರಿಗೆ ಹಂಪಿ ವಿ.ವಿ. ಜಾನಪದ ವಿಭಾಗದ ಮುಖ್ಯಸ್ಥ ಡಾ.ಸಿ.ಟಿ.ಗುರುಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮತ್ತಿತರರು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
