Connect with us

    ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಸ್ | ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ

    mp govinda karjola

    ಮುಖ್ಯ ಸುದ್ದಿ

    ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಸ್ | ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ

    CHITRADURGA NEWS | 17 JUNE 2024
    ಚಿತ್ರದುರ್ಗ:‌ ವಿವೇಚನೆಯಿಲ್ಲದೆ ತೆಗೆದುಕೊಂಡ ತೀರ್ಮಾನಗಳಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಜನರು ಸರ್ಕಾರದ ವರ್ತನೆಗೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ ನಡೆಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬೇಕಾಬಿಟ್ಟಿ ಯೋಜನೆ ಕೊಟ್ಟು ಈಗ ಡೀಸೆಲ್‌, ಪೆಟ್ರೋಲ್ ದರ ಹೆಚ್ಚಿಸಿದ್ದಾರೆ. ಅದನ್ನು ಇಳಿಕೆ ಮಾಡಿ ಯಥಾಸ್ಥಿತಿ‌ ಮುಂದುವರೆಸಬೇಕು’ ಎಂದು ಒತ್ತಾಯಿಸಿದರು.

    ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

    ‘ಬೇರೆ ರಾಜ್ಯಗಳಿಗಿಂತ ಕಡಿಮೆ ದರ ಎನ್ನುವುದು ಭಂಡತನದ ಹೇಳಿಕೆ. ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಸರ್ಕಸ್ ಮಾಡುತ್ತಿದ್ದಾರೆ. ಮೂರು ತಿಂಗಳಿಂದ ಅನ್ನಭಾಗ್ಯ ಹಣ ಹಾಕಿಲ್ಲ’ ಎಂದು ದೂರಿದರು.

    ‘ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷದಲ್ಕಿ ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ.‌ ಮುದ್ದೇಬಿಹಾಳ ಶಾಸಕ ಅಪ್ಪಾಜಿ ಗೌಡ್ರು ಯಾವ ಪುರುಷಾರ್ಥಕ್ಕೆ ಮುಂದುವರೆಯಬೇಕು ಎಂದು‌ ಪ್ರಶ್ನಿಸಿದ್ದಾರೆ. ಇದೇ ರೀತಿ 40 ಶಾಸಕರು ಬಂಡೇಳುತ್ತಿದ್ದಾರೆ’ ಎಂದರು.

    ಕ್ಲಿಕ್ ಮಾಡಿ ಓದಿ: ಕೆಡಿಪಿ ಸಭೆ ಮುಂದೂಡಿಕೆ ಹಿಂದೆ ರಾಜಕೀಯ ಲೆಕ್ಕಚಾರ

    ‘ಬಿತ್ತನೆಗೆ ರೈತರಿಗೆ ಶೇಂಗಾ ಬೀಜ ಸಿಗುತ್ತಿಲ್ಲ. ಕಾಳ ಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಆಗುತ್ತಿದೆ. ಸಮರ್ಪಕ ಪೂರೈಕೆ ಆಗುತ್ತಿಲ್ಲ. ಬರ ಪರಿಹಾರದ ಹಣವನ್ನೂ ಸರಿಯಾಗಿ ಬಿಡುಗಡೆ ಮಾಡಿಲ್ಲ. ಎಲ್ಲದಕ್ಕೂ‌ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಕಳೆದ 74 ವರ್ಷಗಳಲ್ಲಿ ಹೇಗೆ ಆಡಳಿತ ನಡೆದಿದೆ ಅದನ್ನು ಮುಂದುವರೆಸಿ, ಜನರ ದಾರಿ ತಪ್ಪಿಸಬೇಡಿ’ ಎಂದು ತಿರುಗೇಟು ನೀಡಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಗೋಪಾಲಸ್ವಾಮಿ ನಾಯಕ, ಎಸ್.ಆರ್.ಗಿರೀಶ್, ಚಿದಾನಂದ್, ವೆಂಕಟೇಶ್ ಯಾದವ್, ಕಲ್ಲೇಶಯ್ಯ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top