CHITRADURGA NEWS | 30 JULY 2026
ಚಿತ್ರದುರ್ಗ: ಚಿತ್ರದುರ್ಗ ನಗರ ವ್ಯಾಪ್ತಿಯ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 02 ರಂದು ನಡೆಯಲಿರುವ ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜಿರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಹಾಗೂ ಇಂಟರ್‍ನೆಟ್ ಕೇಂದ್ರಗಳನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ಕಾರಣಕ್ಕೂ ಮೊಬೈಲ್ ಪೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

