By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಂದಮ್ಮ ನಿಧನ
    ಶತಾಯುಷಿ ಬಂದಮ್ಮ ನಿಧನ
    10 minutes ago
    ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
    ಜಿಲ್ಲೆಯ ಸೌಹಾರ್ಧ ಸಹಕಾರಿಗಳ ಸಭೆ | ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
    60 minutes ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್
    1 hour ago
    ಬಿ.ವೈ.ವಿಜಯೇಂದ್ರ
    ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆ | ನಾಳೆ ಚಿತ್ರದುರ್ಗಕ್ಕೆ ಬಿ.ವೈ.ವಿಜಯೇಂದ್ರ 
    2 hours ago
    Agriculture Tryning center
    ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ 
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 week ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 07 | ವ್ಯವಹಾರಗಳಲ್ಲಿ ಲಾಭ, ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಹೊಸ ಅವಕಾಶಗಳು
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 06 | ಉದ್ಯೋಗದಲ್ಲಿ ಬಡ್ತಿ, ಶುಭಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 05 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 04 | ಉದ್ಯೋಗದಲ್ಲಿ ನಿರುತ್ಸಾಹದ ವಾತಾವರಣ, ಆತ್ಮೀಯರಿಂದ ಶುಭಸುದ್ದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 03 | ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 06 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 04 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 03 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | 10 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    5 days ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    1 week ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 week ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    Triphala and Shigekai
    ಕೂದಲು ಉದುರುವಿಕೆಗೆ ತ್ರಿಫಲ ಮತ್ತು ಸೀಗೆಕಾಯಿಯನ್ನು ಈ ರೀತಿ ಬಳಸಿ
    13 hours ago
    toothpaste
    ನೀವು ಹಲ್ಲುಜ್ಜಲು ಬಳಸುವ ಟೂತ್‌ಪೇಸ್ಟ್ ಕೂಡ ಮೈಗ್ರೇನ್‌ಗೆ ಕಾರಣವಾಗಬಹುದಂತೆ
    14 hours ago
    Lizards
    ಮನೆಯಲ್ಲಿರುವ ಹಲ್ಲಿಗಳ ಹಾವಳಿಯನ್ನು ನಿವಾರಿಸಲು ಈ ಮನೆಮದ್ದುಗಳನ್ನು ಬಳಸಿ
    2 days ago
    Raisin
    ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ಕುಡಿದರೆ ಸೌಂದರ್ಯ ಹೆಚ್ಚಾಗುತ್ತದೆಯೇ?
    2 days ago
    kidney cancer
    ಈ ಜನರಿಗೆ ಮೂತ್ರಪಿಂಡದ ಕ್ಯಾನ್ಸರ್ ಬರುವ ಅಪಾಯ ಹೆಚ್ಚಂತೆ
    3 days ago
Reading: ಭದ್ರಾ ಮೇಲ್ದಂಡೆ ಯೋಜನೆ 2028 ವೇಳೆಗೆ ಸಿವಿಲ್ ಕಾಮಗಾರಿ ಪೂರ್ಣ | ಸಚಿವ ರಾಮಲಿಂಗಾರೆಡ್ಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ 2028 ವೇಳೆಗೆ ಸಿವಿಲ್ ಕಾಮಗಾರಿ ಪೂರ್ಣ | ಸಚಿವ ರಾಮಲಿಂಗಾರೆಡ್ಡಿ

News Desk Chitradurga News
Last updated: 6 July 2026 07:54
News Desk Chitradurga News
2 days ago
Share
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಸಚಿವ ರಾಮಲಿಂಗಾರೆಡ್ಡಿ ವೀಕ್ಷಣೆ ಮಾಡಿದರು
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಸಚಿವ ರಾಮಲಿಂಗಾರೆಡ್ಡಿ ವೀಕ್ಷಣೆ ಮಾಡಿದರು
SHARE

CHITRADURGA NEWS | 06 JULY 2026

ಚಿತ್ರದುರ್ಗ: ‘ಭದ್ರಾ ಮೇಲ್ದಂಡೆ ಯೋಜನೆ’ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಾಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ, ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಮುಂಬರುವ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ | ಜುಲೈ 06 | ಉದ್ಯೋಗದಲ್ಲಿ ಬಡ್ತಿ, ಶುಭಸುದ್ದಿ

ಚಿತ್ರದುರ್ಗ ಶಾಖಾ ಕಾಲುವೆ ಗೋನೂರು ಅಕ್ವಾ ಡಕ್ಟ್ ಕಾಮಗಾರಿ ವೀಕ್ಷಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು ನಂತರ ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಈ ಭಾಗದ ರೈತರ ಬಹುಕಾಲದ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು 2028ರ ವೇಳೆಗೆ ಸಂಪೂರ್ಣವಾಗಿ ಪೂರ್ಣಗೊಳಿಸಿ, ಜನರಿಗೆ ನೀರು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಚಿತ್ರದುರ್ಗ ಶಾಖಾ ಕಾಲುವೆಯು ಒಟ್ಟು 134.597 ಕಿಲೋಮೀಟರ್ ಉದ್ದವನ್ನು ಹೊಂದಿದ್ದು, ಇದಕ್ಕೆ 16.36 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. 

ಈ ಮೂಲಕ ಜಗಳೂರು ಶಾಖಾ ಕಾಲುವೆ ಸೇರಿದಂತೆ ಚಳ್ಳಕೆರೆ, ಪಾವಗಡ, ಹೊಳಲ್ಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ಕೆರೆಗಳನ್ನು ತುಂಬಿಸಲಾಗುವುದು. ಚಿತ್ರದುರ್ಗ ಶಾಖಾ ಕಾಲುವೆಯ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ಹತ್ತಿರವಿರುವ ವೈ-ಜಂಕ್ಷನ್‌ನಿಂದ ಚಿತ್ರದುರ್ಗ ತಾಲೂಕಿನ ಗೋನೂರು ಅಕ್ವೆಡಕ್ಟ್ವರೆಗಿನ ಒಟ್ಟು 114 ಕಿಲೋಮೀಟರ್ ವ್ಯಾಪ್ತಿಯ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಯ ಅಡೆತಡೆಗಳು ಸಂಪೂರ್ಣವಾಗಿ ನಿವಾರಣೆಯಾಗಿವೆ. 

ಇದನ್ನೂ ಓದಿ: ನಗರಸಭೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಹೆಗಡೆಹಳ್ಳಿಯ ಬಳಿ 200 ಮೀಟರ್ ಕಲ್ಲು ಬಂಡೆಗಳ ಹಾಸು ಎದುರಾಗಿದ್ದು, ಶೀಘ್ರವೇ ಕಲ್ಲು ಬಂಡೆ ತೆರವುಗೊಳಿಸಿ ಯೋಜನೆ ಪೂರ್ಣಗೊಳಿಸಲು ತಾಕೀತು ಮಾಡಿದ್ದೇನೆ. 

ಉಳಿದಂತೆ ಕಾಲುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆಗೆ ಅನುಗುಣವಾಗಿ, ಮುಂಬರುವ ಆಗಸ್ಟ್-2026 ಪ್ರಾಯೋಗಿಕವಾಗಿ ಕಾಲುವೆಯಲ್ಲಿ ನೀರನ್ನು ಹರಿಸಲು ಇಲಾಖೆಯು ಸರ್ವಸನ್ನದ್ಧವಾಗಿ ಯೋಜಿಸಿದೆ. 

ಈ ಪ್ರಾಯೋಗಿಕ ನೀರು ಹರಿಸುವ ಸಂದರ್ಭದಲ್ಲಿ ನಾಲ್ಕು ತಾಲೂಕುಗಳ ಒಟ್ಟು 78 ಕೆರೆಗಳಿಗೆ ನೀರನ್ನು ತುಂಬಿಸಲು ಯೋಜಿಸಲಾಗಿದ್ದು, ಇದರಲ್ಲಿ ಹೊಸದುರ್ಗದ 32 ಕೆರೆಗಳು, ಹೊಳಲ್ಕೆರೆಯ 30 ಕೆರೆಗಳು, ಹಿರಿಯೂರಿನ 12 ಕೆರೆಗಳು ಹಾಗೂ ಚಿತ್ರದುರ್ಗ ತಾಲೂಕಿನ 4 ಕೆರೆಗಳು ಒಳಗೊಂಡಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಚಿತ್ರದುರ್ಗ ಶಾಖಾ ಕಾಲುವೆಯ ಒಟ್ಟು ಅಚ್ಚುಕಟ್ಟು ಪ್ರದೇಶ 1,20,465 ಹೆಕ್ಟೇರ್ ಆಗಿದ್ದು, ಯೋಜನಾ ವರದಿಯಲ್ಲಿದ್ದ 157 ಕೆರೆಗಳ ಜೊತೆಗೆ ಹೆಚ್ಚುವರಿಯಾಗಿ 383 ಕೆರೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರು ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳನ್ನು ಯೋಜನೆಯಡಿ ತುಂಬಿಸಲು ಮನವಿ ಮಾಡಿದ್ದಾರೆ. ಈ ವಿಷಯ ಮಂಡಳಿ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಇದನ್ನೂ ಓದಿ: ಚಿತ್ರದುರ್ಗದ ನಿಯಲಿಟ್ ಕೇಂದ್ರದಲ್ಲಿ ಉದ್ಯೋಗಾವಕಾಶ | ಜುಲೈ 21 ರಂದು ನೇರ ಸಂದರ್ಶನ

ಯೋಜನೆಯಲ್ಲಿ ನಡೆದಿರಬಹುದಾದ ಲೋಪದೋಷಗಳು ಹಾಗೂ ಕಾಮಗಾರಿಯ ಗುಣಮಟ್ಟದ ಬಗ್ಗೆ ಹಾಗೂ ಯೋಜನೆಯಡಿ ವಿತರಣಾ ನಾಲೆಗಳು ಹಾಗೂ ಪೈಪ್‌ಲೈನ್‌ಗಳ ಸ್ಥಿತಿಗತಿ ಕುರಿತು ಮರು ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. 

ವಿತರಣಾ ಕಾಲುವೆಗಳು ಎಲ್ಲೆಲ್ಲಿ ಹಾನಿಗೊಳಗಾಗಿವೆ ಅಥವಾ ಪೈಪ್‌ಗಳು ನಿರುಪಯುಕ್ತವಾಗಿ ಬಿದ್ದಿವೆ ಎಂಬುದನ್ನು ಪತ್ತೆಹಚ್ಚಿ, ಅವುಗಳನ್ನು ದುರಸ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯೋಜನೆ ಪೂರ್ಣ ಸ್ಥಿತಿಗತಿಗಳನ್ನು ತಿಳಿದು ಕೊಳ್ಳೂವ ಸಲುವಾಗಿ ವಾರದ ಒಳಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ಪತ್ರಕರ್ತರ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ಉಣಿಸುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿಗೆ ಡಿಸಿಎಂ ಸೂಚನೆ 

 ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯ ವ್ಯಾಪ್ತಿಗೆ ಒಳಪಡುವ ಕಡೂರು, ತರೀಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ನಮ್ಮ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳ ಕೆರೆಗಳಿಗೆ ನೀರು ಕೊಡುವ ಕೆಲಸವನ್ನು ಮುಂದಿನ ವರ್ಷದಲ್ಲಿ ಮುಗಿಸಬೇಕೆಂದು ಉದ್ದೇಶಿಸಲಾಗಿದೆ. 

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆಯಡಿ ಒಟ್ಟು ರೂ. 5,300 ಕೋಟಿ ಅನುದಾನ ಬಿಡುಗಡೆಯಾಗಬೇಕಿದ್ದು, ಅದನ್ನು ನಾವು ಅತ್ಯಂತ ಆಶಾದಾಯಕವಾಗಿ ನಿರೀಕ್ಷಿಸುತ್ತಿದ್ದೇವೆ. ಇದರೊಂದಿಗೆ ರಾಜ್ಯ ಸರ್ಕಾರವೂ ಸಹ ತನ್ನ ಪಾಲಿನಿಂದ ಎಷ್ಟು ಸಾಧ್ಯವೋ ಅಷ್ಟು ಹಣವನ್ನು ಒದಗಿಸಿ, ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಲು ಸರ್ವ ರೀತಿಯ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ವಿವರಿಸಿದರು.

ಈಗಾಗಲೇ ಸದನದಲ್ಲಿ ಪ್ರಸ್ತಾಪವಾಗಿರುವಂತೆ 2028ರ ಮಾರ್ಚ್ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಲು ಎಲ್ಲ ಅಗತ್ಯ ಪ್ರಯತ್ನಗಳನ್ನು ನಡೆಸುವಂತೆ ಸಂಬ0ಧಪಟ್ಟ ಸಚಿವರಿಗೆ ನಾವೆಲ್ಲರೂ ಮನವಿ ಮಾಡಿದ್ದೇವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಕ್ರಿಯ ಸಹಭಾಗಿತ್ವದಲ್ಲಿ ಯೋಜನೆ ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲು ಕೇಂದ್ರದ ಅನುದಾನ ಬೇಕು 

ಈ ವೇಳೆ ಶಾಸಕರಾದ ಎನ್.ವೈ.ಗೋಪಾಕೃಷ್ಣ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ, ಕೆ.ಎಸ್.ನವೀನ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯ ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ರವಿಶಂಕರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚ0ದ್ರಪ್ಪ ಸೇರಿದಂತೆ ಮತ್ತಿರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper River ProjectChitradurgaChitradurga newsMinister Ramalinga Reddyಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರಾ ಮೇಲ್ದಂಡೆ ಯೋಜನೆಸಚಿವ ರಾಮಲಿಂಗಾರೆಡ್ಡಿ
Share This Article
Facebook Email Print
Previous Article ದಿನ ಭವಿಷ್ಯ ದಿನ ಭವಿಷ್ಯ | ಜುಲೈ 06 | ಉದ್ಯೋಗದಲ್ಲಿ ಬಡ್ತಿ, ಶುಭಸುದ್ದಿ
Next Article Raisin ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ಕುಡಿದರೆ ಸೌಂದರ್ಯ ಹೆಚ್ಚಾಗುತ್ತದೆಯೇ?
Leave a Comment

Leave a Reply Cancel reply

Your email address will not be published. Required fields are marked *

ಬಂದಮ್ಮ ನಿಧನ
ಶತಾಯುಷಿ ಬಂದಮ್ಮ ನಿಧನ
ನಿಧನವಾರ್ತೆ
ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
ಜಿಲ್ಲೆಯ ಸೌಹಾರ್ಧ ಸಹಕಾರಿಗಳ ಸಭೆ | ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
ಮುಖ್ಯ ಸುದ್ದಿ
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್
ಮುಖ್ಯ ಸುದ್ದಿ
ಬಿ.ವೈ.ವಿಜಯೇಂದ್ರ
ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆ | ನಾಳೆ ಚಿತ್ರದುರ್ಗಕ್ಕೆ ಬಿ.ವೈ.ವಿಜಯೇಂದ್ರ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up