CHITRADURGA NEWS | 13 JUNE 2026
ಚಿತ್ರದುರ್ಗ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ.
ಇದನ್ನೂ ಓದಿ: ಸಾಣೇಹಳ್ಳಿ ರಂಗಪ್ರಯೋಗ ಶಾಲೆಯಲ್ಲಿ ರಂಗಶಿಕ್ಷಣ ಡಿಪ್ಲೋಮಾಗೆ ಅರ್ಜಿ ಆಹ್ವಾನ
ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಪ್ರಾತ್ಯಕ್ಷಿಕೆ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪದವಿ ಮತ್ತು ಬಿ.ಇಡಿ ಅಂಕಪಟ್ಟಿಗಳು, ಟಿ.ಇ.ಟಿ ಪ್ರಮಾಣಪತ್ರ ಹಾಗೂ ಸೇವಾ ಪ್ರಮಾಣಪತ್ರಗಳ ಮೂಲ ಪ್ರತಿಗಳೊಂದಿಗೆ 2026ರ ಜೂನ್ 15ರ ಸೋಮವಾರ ಬೆಳಿಗ್ಗೆ 10.30ಕ್ಕೆ ಸಂಬಂಧಪಟ್ಟ ಶಾಲೆಗಳಿಗೆ ಹಾಜರಾಗಲು ಸೂಚಿಸಲಾಗಿದೆ.
ಗಣಿತ, ವಿಜ್ಞಾನ, ಕಂಪ್ಯೂಟರ್ ಸೈನ್ಸ್ ಹಾಗೂ ಹಿಂದಿ ವಿಷಯಗಳ ಅಭ್ಯರ್ಥಿಗಳಿಗೆ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ಸಾಮಾನ್ಯ-24) ಪ್ರಾತ್ಯಕ್ಷಿಕೆ ನಡೆಯಲಿದೆ.
ಇದನ್ನೂ ಓದಿ: ಕಣಿವೆಮಾರಮ್ಮನ ಹರಕೆ ತೀರಿಸದ ಕಾಂಗ್ರೆಸ್ ಕಾರ್ಯಕರ್ತರು
ಇಂಗ್ಲಿಷ್, ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳ ಅಭ್ಯರ್ಥಿಗಳಿಗೆ ಚಿತ್ರದುರ್ಗ ನಗರದ ಸೀಬಾರದ ಎನ್.ಹೆಚ್-4 ಕೇತೇಶ್ವರ ಮಠದ ಸಮೀಪದ ಇರುವ ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ (ಪ. ವರ್ಗ-59) ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

