
CHITRADURGA NEWS | 11 OCTOBER 2025
ಚಿತ್ರದುರ್ಗ: ಡ್ರಗ್ಸ್ ಜಾಲ ಎಲ್ಲಾ ಕಡೆ ವ್ಯಾಪಿಸಿದ್ದು, ಚಿತ್ರದುರ್ಗ ಜಿಲ್ಲೆಯನ್ನು ನಶೆಮುಕ್ತವಾಗಿಸಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‍ಕುಮಾರ್ ಬಂಡಾರು ಮನವಿ ಮಾಡಿದರು.
ಇದನ್ನೂ ಓದಿ: ಅಡಿಕೆ ಬೆಲೆ ಮತ್ತಷ್ಟು ಏರಿಕೆ

ಪೊಲೀಸ್ ಇಲಾಖೆಯಿಂದ ನಗರದ ಜಿ.ಜಿ. ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 75ನೇ ನಾಗರೀಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.
ನಶೆ ಮುಕ್ತ ಕರ್ನಾಟಕ ಆಪ್ ಡೌನ್‍ಲೋಡ್ ಮಾಡಿಕೊಂಡು ಎಲ್ಲೆಲ್ಲಿ ಡ್ರಗ್ಸ್ ಮಾರಾಟ ಸೇವನೆಯಾಗುತ್ತಿದೆ ಎಂಬ ಸುಳಿವು ಸಿಕ್ಕರೆ ನಮಗೆ ಮಾಹಿತಿ ಕೊಡಿ ನಿಮ್ಮ ಹೆಸರು ವಿಳಾಸವನ್ನು ಗೌಪ್ಯವಾಗಿಡಲಾಗುವುದು. ಇಲಾಖೆಯಲ್ಲಿ ಸಿಬ್ಬಂದಿಗಳ ಕೊರೆತೆಯಿರುವುದರಿಂದ ಜನಸಾಮಾನ್ಯರು ಪೊಲೀಸ್ ಇಲಾಖೆಗೆ ಸಹಕರಿಸಿದಾಗ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಿದರು.
ನಾಗರೀಕ ಬಂದೂಕು ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಶಿಸ್ತು, ಸಮಯ ಪ್ರಜ್ಞೆ ರೂಢಿಸಿಕೊಳ್ಳಲು ಸಹಕಾರಿಯಾಗಲಿದೆ. ಪ್ರತಿ ನಾಗರೀಕನು ಕಮ್ಯುನಿಟಿ ಪೊಲೀಸ್ ಆಗಬೇಕು. ದಿನನಿತ್ಯ ಬೆಳಿಗ್ಗೆ ಎದ್ದು ವ್ಯಾಯಾಮ, ಯೋಗ, ಧ್ಯಾನ, ವಾಯುವಿಹಾರ ಮಾಡುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ.
ಜಿಲ್ಲೆಯ ಐದು ನೂರು ಯುವಕ-ಯುವತಿಯರಿಗೆ ಇದೇ ತಿಂಗಳ 26 ನೇ ತಾರೀಖಿನಂದು ಫಿಟ್ನೆಸ್ ಚಾಲೆಂಜ್ ಸ್ಪರ್ಧೆ ಏರ್ಪಡಿಸಿ 50 ಮಂದಿಯನ್ನು ಆಯ್ಕೆ ಮಾಡಿ ವಿಜೇತರಿಗೆ ಎರಡು ಸಾವಿರ ರೂ. ನಗದು ಬಹುಮಾನ, ಸರ್ಟಿಫಿಕೇಟ್‍ಗಳನ್ನು ನೀಡಲಾಗುವುದೆಂದರು.
ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಸಹಾಯಕ್ಕಾಗಿ 1930, ಹೆಲ್ಪ್‍ಲೈನ್ ನಂ. 112 ಕ್ಕೆ ಸಂಪರ್ಕಿಸಬಹುದೆಂದು ತಿಳಿಸಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಪ್ರಕರಣ ಹೆಚ್ಚಳ ಅಪಾಯಕಾರಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಳವಳ
ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಶಿವಕುಮಾರ್ ಆರ್. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ. ಜೆ.ಶ್ರೀನಿವಾಸ್, ನಾಗರೀಕ ಬಂದೂಕು ತರಬೇತಿ ಶಿಬಿರದ ಅಧ್ಯಕ್ಷ ಎಂ.ಎಂ.ಮೊಹಮದ್ ಆಲಿ ವೇದಿಕೆಯಲ್ಲಿದ್ದರು.
ರೈಫಲ್ ಶೂಟಿಂಗ್‍ನಲ್ಲಿ ಪ್ರಥಮ ಸ್ಥಾನ ಗಳಿಸಿದ ರಾಜೇಶ್ ಮದರಿ, ದ್ವಿತೀಯ ಸ್ಥಾನ ಗಳಿಸಿರುವ ಎನ್.ಬಿ.ಬೋರಣ್ಣ, ತೃತೀಯ ಸ್ಥಾನ ಪಡೆದಿರುವ ಪುನೀತ್ ಬಿ. ಾವರಿಗೆ ಪ್ರಮಾಣ ಪತ್ರ ವಿತರಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
