
ಚಿತ್ರದುರ್ಗ ನ್ಯೂಸ್.ಕಾಂ: ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದಲ್ಲಿ ಚಿತ್ರದುರ್ಗದ ಸಿ.ಎಂ.ಚೈತನ್ಯ ಎಂ.ಕಾಂ ಪದವಿಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಪಡೆದಿದ್ದಾರೆ.
ಇದನ್ನೂ ಓದಿ: ಮೈಸೂರು ದಸರಾಕ್ಕೆ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಟ್ಯಾಬ್ಲೋ
ಸಿ.ಎಂ.ಚೈತನ್ಯ 2019-20ನೇ ಸಾಲಿನಲ್ಲಿ ಬಿ.ಕಾಂ. ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಪ್ರಥಮ ರ್ಯಾಂಕ್ ಪಡೆದು ಎರಡು ಚಿನ್ನದ ಪದಕ ಪಡೆದಿದ್ದರು.
2016-17ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾಣಿಜ್ಯಶಾಸ್ತ್ರದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು.

ಸಿ.ಎಂ.ಚೈತನ್ಯ ಅವರ ತಂದೆ ಡಾ.ಸಿ.ಚನ್ನಕೇಶವ ಚಿತ್ರದುರ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಪಿ.ಕೆ.ಮಂಜುಳಾ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
