CHITRADURGA NEWS | 24 JULY 2026
ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜುಲೈ 25 ಹಾಗೂ 26 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.
ಇದನ್ನೂ ಓದಿ: ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಜುಲೈ 25 ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು.
ನಂತರ ರಸ್ತೆಯ ಮೂಲಕ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12:30ಕ್ಕೆ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸುವರು.
ಸಂಜೆ 05 ಗಂಟೆಗೆ ಮುರುಘಾಮಠ ಆವರಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವರು.
ಇದನ್ನೂ ಓದಿ: ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಜುಲೈ 26 ಭಾನುವಾರ ಬೆಳಿಗ್ಗೆ 09:50ಕ್ಕೆ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಆಯೋಜಿಸಿರುವ “ಕಾರ್ಗಿಲ್ ವಿಜಯ ದಿವಸ್” ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಬೆಳಿಗ್ಗೆ 10:30 ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 11:30 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು.
ತದನಂತರ ಹಿರಿಯೂರಿನ ನೆಹರೂ ಮೈದಾನದಲ್ಲಿ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಭಾವಪೂರ್ಣ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
ಮಧ್ಯಾಹ್ನ 03 ಗಂಟಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

