CHITRADURGA NEWS | 20 NOVEMBER 2026
ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದೇ ನವೆಂಬರ್ 21ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಜಿಲ್ಲೆಯಲ್ಲಿ 6 ಹೊಸ ಮತಗಟ್ಟೆ ಆರಂಭಕ್ಕೆ ಪ್ರಸ್ತಾವನೆ | ಜಿಲ್ಲಾಧಿಕಾರಿ ಎಸ್.ರಮ್ಯಾ ಅಧ್ಯಕ್ಷತೆಯಲ್ಲಿ ನಡೆದ ಸಭೆ
ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಹಿರಿಯೂರು ನಗರದ ಹುಳಿಯಾರು ರಸ್ತೆಯ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ತಾಲ್ಲೂಕು ಕ್ರೀಡಾಂಗಣಕ್ಕೆ ಆಗಮಿಸುವರು.
ನಂತರ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್ ವತಿಯಿಂದ ಹಮ್ಮಿಕೊಂಡಿರುವ ಪ್ರಜಾಸೇವೆ ಅಭಿಯಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 4ಕ್ಕೆ ಹಿರಿಯೂರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇದನ್ನೂ ಓದಿ: ಬೋರ್ ವೆಲ್ ಕೊರೆಯುವ ದರ ಇಳಿಕೆಗೆ ರೈತರ ಒತ್ತಾಯ | ಏಕಾಏಕಿ ಅಡಿಗೆ 30 ರೂ. ಹೆಚ್ಚಳ
ಸಂಜೆ 5ಕ್ಕೆ ಹಿರಿಯೂರು ತಾಲ್ಲೂಕು ಕ್ರೀಡಾಂಗಣ ಹೆಲಿಪ್ಯಾಡ್ನಿಂದ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

