ಮುಖ್ಯ ಸುದ್ದಿ
ಚಿತ್ರದುರ್ಗ ಜಿಲ್ಲೆಗೆ ಜ.23 ರಂದು ಸಿಎಂ, ಡಿಸಿಎಂ | ವಿವಿ ಸಾಗರಕ್ಕೆ ಬಾಗಿನ ಸಮರ್ಪಣೆ
CHITRADURGA NEWS | 21 JANUARY 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನಲ್ಲಿರುವ ವಾಣಿವಿಲಾಸ ಸಾಗರ ಜಲಾಶಯವು 3ನೇ ಬಾರಿ ಭರ್ತಿಯಾಗಿದೆ. ಜಿಲ್ಲೆಯ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
Also Read: ಮೈಸೂರು ಮಹಾರಾಜರಿಂದ ವಾಣಿವಿಲಾಸ ಸಾಗರಕ್ಕೆ ಬಾಗೀನ ಅರ್ಪಣೆ
ಈ ಶುಭ ಸಂದರ್ಭದಲ್ಲಿ ಜ.23 ರಂದು ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ವಿ.ವಿ.ಪುರ ಗ್ರಾಮದ ವಾಣಿವಿಲಾಸ ಸಾಗರ ಜಲಾಶಯದ ಬಳಿ ಜರಗುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗಂಗಾಪೂಜೆ ನೆರವೇರಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತರಿರುವರು.
Also Read: SSLC ವಿದ್ಯಾರ್ಥಿಗಳಿಗೆ ಆಕಾಶವಾಣಿ ಪೋನ್-ಇನ್ | ನಿಮ್ಮ ಪ್ರಶ್ನೆಗಳಿಗೆ ತಜ್ಞರ ಉತ್ತರ
ಮುಖ್ಯ ಅತಿಥಿಗಳಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಡಿ.ಟಿ.ಶ್ರೀನಿವಾಸ್, ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ವಿ.ವಿ.ಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಟಿ.ಗಂಗಮ್ಮ ಉಮೇಶ್, ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷೀದೇವಿ ಮದ್ದಣ್ಣ.ಆರ್ ಸೇರಿದಂತೆ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.
ಜನಸಂಪನ್ಮೂಲ ಇಲಾಖೆ ಸರ್ಕಾರ ಕಾರ್ಯದರ್ಶಿ ಗೌರವ್ ಗುಪ್ತ, ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿ.ಪಂ.ಸಿಇಓ ಸೋಮಶೇಖರ್.ಎಸ್.ಜೆ, ಭದ್ರಾ ಮೇಲ್ದಂಡೆ ಚಿತ್ರದುರ್ಗ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಎಫ್.ಹೆಚ್.ಲಮಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.