Connect with us

CM Siddaramayya; ಸಿಎಂ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ | MLC ಕೆ.ಎಸ್.ನವೀನ್

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್

ಮುಖ್ಯ ಸುದ್ದಿ

CM Siddaramayya; ಸಿಎಂ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ | MLC ಕೆ.ಎಸ್.ನವೀನ್

CHITRADURGA NEWS | 17 OCTOBER 2024

ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆಸಿ, ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya) ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅವರು ಸಮುದಾಯದ ಕ್ಷಮೆಯಾಚನೆ ಮಾಡಬೇಕು ಎಂದು ಎಂಎಲ್ಸಿ ಕೆ.ಎಸ್.ನವೀನ್ ಹೇಳಿದರು.

ಕ್ಲಿಕ್ ಮಾಡಿ ಓದಿ: Rain Damage: ಮಳೆಯಿಂದ ಮನೆ ಗೋಡೆ ಕುಸಿತ | ಮನೆಯಲ್ಲಿದ್ದ ವೃದ್ಧೆ ಸಾವು

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪುಷ್ಪಾರ್ಚನೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ವಾಲ್ಮೀಕಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಅನುದಾನವನ್ನು ದುರ್ಬಳಕೆ ಮಾಡಿ ಮೋಜು ಮಸ್ತಿ, ಚುನಾವಣೆಗೆ ಬಳಕೆ ಮಾಡಿದ್ದು, ಈಗ ಅದರ ಹತ್ತು ಪಟ್ಟು ಅನುದಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುವುದರಲ್ಲಿ ಎತ್ತಿದ ಕೈ. ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಪಡೆದುಕೊಂಡರು. ಮುಡಾ ಕೇಸ್‌ನಲ್ಲಿ ಮುಡಾ ಅಧ್ಯಕ್ಷರ ರಾಜೀನಾಮೆ ಕೊಡಿಸಿದ್ದಾರೆ. ಆದರೆ, ಈ ಎಲ್ಲ ಹಗರಣಗಳ ಡಾನ್ ಸಿದ್ದರಾಮಯ್ಯ ಮಾತ್ರ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಕುಟುಕಿದರು.

ಕ್ಲಿಕ್ ಮಾಡಿ ಓದಿ: Sri Maharshi Valmiki; ಚಿತ್ರದುರ್ಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆ

ವಾಲ್ಮೀಕಿ ಸಮುದಾಯದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಹಣ ಬಳಕೆ ಮಾಡಿಕೊಂಡು ಬಳ್ಳಾರಿ ಲೋಕಸಭೆ, ಆಂಧ್ರಪ್ರದೇಶದ ಚುನಾವಣೆ ಎದುರಿಸಿದ್ದಾರೆ. ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದಾರೆ ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಮಹರ್ಷಿಗಳ ಎದುರು ನಿಂತು ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್, ಖಜಾಂಚಿ ಎಸ್.ಆರ್.ಗಿರೀಶ್, ಎಸ್ಟಿ ಮೋರ್ಚಾ ಅಧ್ಯಕ್ಷ ಶಿವಣ್ಣ, ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಮುಖಂಡ ಪಾಪೇಶ್ ಇತರರಿದ್ದರು.

ಮದಕರಿ ನಾಯಕ ಥೀಮ್‌ಪಾರ್ಕ್ಗೆ ಜಾಗ ಕೇಳಿದ್ದೇವೆ:

ನಗರದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ 30 ಎಕರೆ ಜಮೀನು ಬೇಕಾಗಿದೆ. ಅದನ್ನು ಜಿಲ್ಲಾಡಳಿತ ನೀಡಿದರೆ ನಮ್ಮ ನಾಯಕರಾದ ಅಮಿತ್ ಶಾ ರವರು ನೀಡಿದಂತಹ ಭರವಸೆಯನ್ನು ಈಡೇರಿಸಲಿದ್ದೇವೆ. ಪ್ರವಾಸೋದ್ಯಮ ಇಲಾಖೆಯ ಭೂಮಿ ಯಾರ ಒಡೆತನಕ್ಕೆ ಸೇರಿದೆ ಎಂಬುದು ಮಾಹಿತಿ ನೀಡುತ್ತಿಲ್ಲ.

ಕ್ಲಿಕ್ ಮಾಡಿ ಓದಿ: Internal Reservation: ಒಳಮೀಸಲಾತಿಗೆ ಆಗ್ರಹಿಸಿ ಬೀದಿಗಿಳಿದ ಮಾದಿಗ ಸಂಘಟನೆಗಳು | ರಾಜ್ಯ ಸರ್ಕಾರದ ತೀವ್ರ ಆಕ್ರೋಶ

ತಿಮ್ಮಣ್ಣನಾಯಕನ ಕೆರೆಯಲ್ಲಿ ಜಮೀನು ಸಿಗುತ್ತೆ ಅಲ್ಲಿ ನಿರ್ಮಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಕೆ.ಎಸ್.ನವೀನ್ ತಿಳಿಸಿದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version