CHITRADURGA NEWS | 10 MAY 2026
ಚಿತ್ರದುರ್ಗ: ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರ ಹಿರಿಯೂರಿಗೆ | ಅಂತಿಮ ದರ್ಶನಕ್ಕೆ ವ್ಯವಸ್ಥೆ | ನಾಳೆ ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ
ಅವರು ಇಂದು ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು.
ಸಹಕಾರ ಕ್ಷೇತ್ರಕ್ಕೂ ಕೊಡುಗೆ
ಸುಧಾಕರ್ ಅವರು ಮೂಲತಃ ಚಳ್ಳಕರೆಯವರು. 2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.
ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡಾ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು ಎಂದು ವಿವರಿಸಿ, ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಜನಪ್ರಿಯ ವ್ಯಕ್ತಿಯಾಗಿದ್ದರು ಎಂದರು.
ಆತ್ಮಕ್ಕೆ ಚಿರಶಾಂತಿ ದೊರಕಲಿ
ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಮೂರು ದಿನಗಳ ಶೋಕಾಚರಣೆ
ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದರು.
ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ನಾಳೆ ಚಳ್ಳಕೆರೆಯಲ್ಲಿ ಸಂಜೆ 4.00 ಗಂಟೆಗೆ ನಡೆಯಲಿರುವ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಅವರ ಮತಕ್ಷೇತ್ರ ಹಿರಿಯೂರಿಗೆ ಅವರ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಇರಿಸಿದ್ದು, ನಾಳೆ ಚಳ್ಳಕೆರೆಗೆ ಕರೆದೊಯ್ಯಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಇನ್ನಿಲ್ಲ | ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ
ಎಲ್ಲಾ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
