
CHITRADURGA NEWS | 17 JULY 2024
ಚಿತ್ರದುರ್ಗ: ಜಗದ್ಗುರು ಶ್ರೀ ಸಿದ್ದರಾಮೇಶ್ವರ ಮಹಾಸಂಸ್ಥಾನ (ಭೋವಿ ಗುರುಪೀಠ)ದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪೀಠಾಧ್ಯಕ್ಷರಾಗಿ 25 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಮಠದಲ್ಲಿ ಆಯೋಜಿಸಿರುವ ಶ್ರೀಗಳ ಧೀಕ್ಷಾ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ | ಭೋವಿ ಗುರುಪೀಠದಲ್ಲಿ ಪೂರ್ವಭಾವಿ ಸಭೆ
ಭೋವಿ ಗುರುಪೀಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಎಂ.ರಾಮಪ್ಪ, ಭೋವಿ ಗುರುಪೀಠ ಶ್ರೀ ಸಿದ್ದರಾಮೇಶ್ವರ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿ 25 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಧೀಕ್ಷಾ ರಜತ ಮಹೋತ್ಸವ ಕಾರ್ಯಕ್ರಮ ಜು.20 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ಮುಖ್ಯಮಂತ್ರಿಗೆ ಶ್ರೀಗಳಿಂದ ಆಶೀರ್ವಾದ | ಭೋವಿ ಗುರುಪೀಠಕ್ಕೆ ಭೇಟಿ
ಈ ಸಂಆರಂಭದಲ್ಲಿ ಸಮುದಾಯದ ಮುಖಂಡರು, ಸಚಿವರಾದ ಶಿವರಾಜ್ ತಂಗಡಗಿ ಭಾಗವಹಿಸುವರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು, ಶಾಸಕರನ್ನೂ ಆಹ್ವಾನಿಸಲಾಗಿದೆ ಎಂದು ಹೇಳಿದರು.
ಜು.18 ರಿಂದಲೇ ಮಠದಲ್ಲಿ ಅನೇಕ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ಗುರುವಾರ ಸಾಲುಮರದ ತಿಮ್ಮಕ್ಕ ಭಾಗವಹಿಸುವರು. ವಧು ವರರ ಸಮಾವೇಶ, ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರಗಳನ್ನೂ ಆಯೋಜಿಸಲಾಗಿದೆ ಎಂದರು.
ಇದನ್ನೂ ಓದಿ: ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗೆ ಆಹ್ವಾನ
ಕಾರ್ಯಕ್ರಮದಲ್ಲಿ ಐಎಎಸ್, ಐಪಿಎಸ್ ಮಾಡಿರುವ ಭೋವಿ ಸಮುದಾಯದ ಸಾಧಕರು, ಭೋವಿ ಅಭಿವೃದ್ದಿ ನಿಗಮಕ್ಕೆ ನೇಮಕವಾಗಿರುವ ರವಿಕುಮಾರ್ ಹಾಗೂ ಕೆಪಿಎಸ್‍ಸಿಗೆ ನೂತನ ಸದಸ್ಯರಾಗಿರುವ ಸಮಾಜದವರಿಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಈ ಕಾರ್ಯಕ್ರಮಕ್ಕಾಗಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನಾಡಿನಾದ್ಯಂತ ಪ್ರವಾಸ ಮಾಡಿ ಸಂಘಟನೆ ಮಾಡುತ್ತಿದ್ದಾರೆ. ಈ ಹಿಂದೆ ಜು.18 ರಂದು ಗುರುಗಳ ಜನ್ಮ ದಿನದಂದು ಭೋವಿ ಜನೋತ್ಸವ ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಅಧಿವೇಶನ ನಡೆಯುತ್ತಿರುವುದರಿಂದ ಜು.20ಕ್ಕೆ ರಜತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ 35 ಲಕ್ಷ ಭೋವಿ ಜನಾಂಗ:
ಭೋವಿ ಸಮಾಜದ ಜಿಲ್ಲಾಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಮಾತನಾಡಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪೀಠಾಧ್ಯಕ್ಷರಾಗಿ 25 ವರ್ಷಗಳಾಗಿರುವುದರಿಂದ ದೀಕ್ಷಾ ರಜತ ಮಹೋತ್ಸವ ಆಚರಿಸುತ್ತಿದ್ದೇವೆ. ರಾಜ್ಯದಲ್ಲಿ 35 ಭೋವಿ ಲಕ್ಷದಷ್ಟು ಜನಸಂಖ್ಯೆಯಿದ್ದು, ಸಂಘಟನೆಯಾಗುವುದು ಇದರ ಉದ್ದೇಶವಾಗಿದೆ. ಜನಾಂದೋಲನ ರೂಪದಲ್ಲಿ ಆಚರಿಸುತ್ತಿರುವ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲರನ್ನು ಆಹ್ವಾನಿಸಲಾಗಿದೆ. ಸುಮಾರು ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಇದನ್ನೂ ಓದಿ: ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ
ಭೋವಿ ಸಮಾಜದ ನಿಕಟ ಪೂರ್ವ ಅಧ್ಯಕ್ಷ ಡಿ.ತಿಮ್ಮಣ್ಣ ಮಾತನಾಡಿ, 1982 ರಲ್ಲಿ ಭೋವಿ ಸಮಾಜ ಈ ಪ್ರಮಾಣದಲ್ಲಿ ಸಂಘಟನೆ ಆಗಿರಲಿಲ್ಲ. ನಮ್ಮ ಸಮಾಜಕ್ಕೆ ಮಂಜರಿ ಹನುಮಂತಪ್ಪನವರ ಕೊಡುಗೆಯಿದೆ. ಸಮಾಜವನ್ನು ಸಂಘಟಿಸುವ ಉದ್ದೇಶದಿಂದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ದೀಕ್ಷಾ ರಜತ ಮಹೋತ್ಸವ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಕುರಿ, ಮೇಕೆ ಸಾಕಾಣಿಕೆಗೆ ಅರ್ಜಿ ಅಹ್ವಾನ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ತಿಪ್ಪೇಸ್ವಾಮಿ, ಭೋವಿ ಸಂಘದ ಖಜಾಂಚಿ ಈ.ಮಂಜುನಾಥ್, ಮುಖಂಡರಾದ ಎಚ್.ಲಕ್ಷ್ಮಣ್, ಸಿಇಓ ಗೌನಹಳ್ಳಿ ಗೋವಿಂದಪ್ಪ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
