
ಚಿತ್ರದುರ್ಗ ನ್ಯೂಸ್.ಕಾಂ: ನಿಮಗೆಲ್ಲಾ 2 ಸಾವಿರ ದುಡ್ಡು ಬಂತಾ, ಅನ್ನಭಾಗ್ಯದ 170 ರೂಪಾಯಿ ಬಂತಾ ಎಂದು ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯಲ್ಲಿದ್ದ ಮಹಿಳೆಯರು ಬಂದಿಲ್ಲ ಸ್ವಾಮಿ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಿತ್ರದುರ್ಗದ ಕವಾಡಿಗರಹಟ್ಟಿಗೆ ಭೇಟಿ ನೀಡಿದ್ದ ವೇಳೆ, ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತಿದೆ. ನಿಮಗೆಲ್ಲಾ ಹಣ ಬಂತಾ ಎಂದು ಸಹಹವಾಗಿ ಕೇಳಿದರು.
ಈ ವೇಳೆ ಮಹಿಳೆಯರು ಬಂದಿಲ್ಲ ಸ್ವಾಮಿ ಎಂದರು. ಅಕ್ಕಪಕ್ಕದಲ್ಲಿದ್ದ ಕಾಂಗ್ರೆಸ್ ನಾಯಕರು, ಬಂದಿರಬಹುದು ನೋಡಿ ಎಂದಾಗ ಬಂದಿಲ್ಲ ಎಂದು ಕೈ ಎತ್ತಿ ಹೇಳಿದರು.

ಈ ವೇಳೆ ನೋಡಿ, ಏನಾಗಿದೆ ವಿಚಾರಿಸಿ ಎಂದು ಸಚಿವ ಸುಧಾಕರ್ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ 1.10 ಕೋಟಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಬಂದಿದೆ. ಇನ್ನೂ 16 ಲಕ್ಷ ಮಹಿಳೆಯರ ಖಾತೆಗೆ ಹಣ ಬರಬೇಕಿದೆ. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಮಸ್ಯೆಯಿಂದ ಬಂದಿಲ್ಲ. ಬರುತ್ತೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
