
CHITRADURGA NEWS | 16 JUNE 2026
ಹಿರಿಯೂರು: ಸರ್ಕಾರಿ ಶಾಲೆಯ ಅಡುಗೆ ಕೋಣೆಗೆ ನಾಗರಹಾವು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಹಿರಿಯೂರು ತಾಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ: ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಗರಹಾವು ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿತ್ತು.
ಶಾಲೆಯ ಅಡುಗೆ ಕೋಣೆಗೆ ನುಗ್ಗಿದ್ದ ನಾಗರ ಹಾವು ಕಂಡ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯಭೀತರಾಗಿದ್ದರು.
ಕೂಡಲೇ ಉರಗ ತಜ್ಞ ಸ್ನೇಕ್ ಚಂದನ್ ಅವರನ್ನು ಕರೆಯಿಸಿ ಸುರಕ್ಷಿತವಾಗಿ ಹಿಡಿದು ಹೊರಗೆ ಬಿಡಲಾಗಿದೆ.
ಇತ್ತೀಚೆಗಷ್ಟೇ ಬೆಳಗಟ್ಟದಲ್ಲಿ ಸರ್ಕಾರಿ ಶಾಲಾ ಬಾಲಕಿಗೆ ಹಾವು ಕಚ್ಚಿ ಶಿಕ್ಷಕರು ಸಮಯಪ್ರಜ್ಞೆ ಮೆರೆದಿದ್ದರು.
ಇದನ್ನೂ ಓದಿ: ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ ಜನಜೀವನ ಅಸ್ತವ್ಯಸ್ತ
ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಶಾಲೆಯ ಅಡುಗೆ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿತ್ತು.
ಸದ್ಯ ಹಾವು ಶಿಕ್ಷಕರ ಕಣ್ಣಿಗೆ ಬಿದ್ದಿದ್ದು, ಅದನ್ನು ಹಿಡಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿರುವುದು ನಿಟ್ಟುಸಿರು ಬಿಡುವಂತಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
