CHITRADURGA NEWS | 27 MARCH 2026
ಚಿತ್ರದುರ್ಗ: 2026-27ನೇ ಸಾಲಿಗೆ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕವಾಗಿ ವಸೂಲಿ ಮಾಡುವ ನಿಟ್ಟಿನಲ್ಲಿ, ಚಿತ್ರದುರ್ಗ ನಗರಸಭೆ ಕಾರ್ಯಾಲಯ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 06 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಅಡಿಕೆ ಸಿಪ್ಪೆಯಲ್ಲಿ ಕಾಂಪೋಸ್ಟ್ ತಯಾರಿಕೆ ಕುರಿತು ತರಬೇತಿ
ಈ ಯೋಜನೆಯಡಿ ಆಯ್ಕೆಯಾಗ ಬಯಸುವ ಮಹಿಳಾ ಸ್ವ-ಸಹಾಯ ಸಂಘಗಳು ಈಗಾಗಲೇ ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿಕೊಂಡಿರಬೇಕು ಹಾಗೂ ಪಂಚಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುತ್ತಿರಬೇಕು. ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಮತ್ತು ಎಲೆಕ್ಟ್ರಾನಿಕ್ ಪರಿಕರಗಳ ಬಳಕೆ ಗೊತ್ತಿರಬೇಕು.
ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿರಬೇಕು. ಬ್ಯಾಂಕಿನಲ್ಲಿ ತಮ್ಮ ಖಾತೆಯಲ್ಲಿ ಸಾಲ ಪಡೆದು ನಿಯಮಿತವಾಗಿ ಮರು ಪಾವತಿ ಮಾಡಿರಬೇಕು.
ಇದನ್ನೂ ಓದಿ: PUC ಶಿಕ್ಷಣದೊಂದಿಗೆ ವೃತ್ತಿಪರ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಆಸಕ್ತ ಮತ್ತು ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಚಿತ್ರದುರ್ಗ ನಗರಸಭೆ ಕಚೇರಿಯ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯಕ್ತರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
