
CHITRADURGA NEWS | 20 AUGUST 2025
ಚಿತ್ರದುರ್ಗ: ನಗರದ ಕಾಲೇಜು ವಿದ್ಯಾರ್ಥಿನಿ ಮೃತ ದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಗರದ ಹೊರವಲಯದ ಗೋನೂರು ಬ್ರಿಡ್ಜ್ ಬಳಿ (ಹೊಸ ಹೈವೇ) ಖಾಸಗಿ ಜಮೀನಿನಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಆಟೋ ಚಾಲಕನ ಕೊಲೆ ಕೇಸ್ | ಪತ್ನಿ, ಪುತ್ರ, ಬೆಂಗಳೂರು ಮೂಲದ ಟಚ್ ಗಣೇಶ್ ಅರೆಸ್ಟ್
ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಶಂಕೆಯಿದೆ. ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಗೆ ತರಲಾಗಿದೆ.
ಮೃತ ವಿದ್ಯಾರ್ಥಿನಿ ಹಿರಿಯೂರು ತಾಲೂಕಿನ ಕೋವೆರಹಟ್ಟಿ ಮೂಲದ ವರ್ಷಿತಾ ಎಂದು ಗುರುತಿಸಿದ್ದು, ಪೋಷಕರ ಆಕ್ರಂಧನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ: ಅಡಿಕೆ ಧಾರಣೆಯ ನಾಗಾಲೋಟ | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ತಲುಪಿದ ರಾಶಿ
ಚಿತ್ರದುರ್ಗದಲ್ಲಿ ಹಾಸ್ಟೆಲ್ ನಲ್ಲಿದ್ದು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಅರೆಬರೆ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ದಾಖಲೆ ಕಲೆಹಾಕಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಹೊಸದುರ್ಗ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
ಎಬಿವಿಪಿಯಿಂದ ಕಾಲೇಜು ಬಂದ್ ಕರೆ:
ವಿದ್ಯಾರ್ಥಿನಿಯ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಚಿತ್ರದುರ್ಗ ನಗರದ ಎಲ್ಲ ಕಾಲೇಜುಗಳ ಬಂದ್ ಕರೆಕೊಟ್ಟಿದೆ. ನಂತರ ಡಿಸಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಭಾಗ ಸಂಚಾಲಕ ಗೋಪಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
