CHITRADURGA NEWS | 15 MAY 2025
ಚಿತ್ರದುರ್ಗ: ನಾಡ ದೊರೆ ರಾಜವೀರ ಮದಕರಿ ನಾಯಕನ 243 ನೇ ಪುಣ್ಯಸ್ಮರಣೆಯನ್ನು ಗುರುವಾರ ನಾಯಕ ಸಮಾಜದಿಂದ ಮದಕರಿ ನಾಯಕನ ಪ್ರತಿಮೆಗೆ ಬೃಹಧಾಕಾರವಾದ ಹೂಮಾಲೆ ಅರ್ಪಿಸಿ ನಂತರ ರಾಜಾವೀರ ಮದಕರಿನಾಯಕ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
Also Read: ಚಿತ್ರದುರ್ಗಕ್ಕೆ ಮತ್ತೊಂದು ರೈಲು ಮಾರ್ಗ | ಮಲೆನಾಡಿನಿಂದ ಅರೆ ಮಲೆನಾಡು ಸಂಪರ್ಕ | 1825 ಕೋಟಿ ವೆಚ್ಚ
ನಂತರ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶ್ರೀರಂಗಪಟ್ಟಣದಲ್ಲಿ ರಾಜಾವೀರ ಮದಕರಿನಾಯಕನ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದರು.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ, ರಾಜನಹಳ್ಳಿಯಲ್ಲಿ ನಮ್ಮ ಮಠವಿದೆ. ಸ್ವಾಮೀಜಿಗಳು ಹೇಳಿದಂತೆ ನಾವುಗಳು ಕೇಳುತ್ತೇವೆ. ಅಮಿತ್‍ಷಾ ಚಿತ್ರದುರ್ಗಕ್ಕೆ ಬಂದಾಗ ಥೀಮ್ ಪಾರ್ಕ್ ನಿರ್ಮಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೂ ಈಡೇರಿಲ್ಲ.
ತಿಮ್ಮಣ್ಣನನಾಯಕ ಕೆರೆ ಸಮೀಪ ತೋಟಗಾರಿಕೆ ಇಲಾಖೆಗೆ ಸೇರಿದ ಸಾಕಷ್ಟು ಜಾಗವಿದೆ. ಅಲ್ಲಿ ಥೀಮ್ ಪಾರ್ಕ್ ನಿರ್ಮಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕೇಂದ್ರ ಸರ್ಕಾರವನ್ನು ಎಚ್ಚರಿಸಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಬಾಲೇನಹಳ್ಳಿ ತಿಪ್ಪೇಸ್ವಾಮಿ, ನಗರಸಭೆ ಸದಸ್ಯ ವೆಂಕಟೇಶ್, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್.ಟಿ.ಸೆಲ್ ವಿಭಾಗದ ಅಧ್ಯಕ್ಷ ಮಂಜುನಾಥ್, ರತ್ನಮ್ಮ, ಹೆಚ್.ಅಂಜಿನಪ್ಪ, ಪ್ರಶಾಂತ್ ಕೂಲಿಕಾರ್, ಯುವ ನ್ಯಾಯವಾದಿ ಅಶೋಕ್ ಬೆಳಗಟ್ಟ, ಓಬಳೇಶ್ ಮುದ್ದಾಪುರ ಹೊಸಹಟ್ಟಿ ಸೇರಿದಂತೆ ಇತರರು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
