CHITRADURGA NEWS | 29 September 2026
ಚಿತ್ರದುರ್ಗ: ಎರಡೂ ಕೈ ಬಿಟ್ಟು ಬೈಕ್ ಓಡಿಸಿ, ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿದ ಬೈಕ್ ಸವಾರ ನಗರದ ಟ್ರಾಫಿಕ್ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಇದನ್ನೂ ಓದಿ: ರಾಜ್ಯದ ವಿವಿಧ ಮಠಾಧೀಶರಿಂದ ತಿರುಮಲ ದರ್ಶನ
ಬೈಕ್ನ ಹ್ಯಾಂಡಲ್ನಿಂದ ಎರಡೂ ಕೈ ಬಿಟ್ಟು ಅಪಾಯಕಾರಿ ರೀತಿಯಲ್ಲಿ ಬೈಕ್ ಓಡಿಸಿದ ಈ ಯುವಕನ ವಿರುದ್ಧ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಠಾಣೆಯ ಸಿಬ್ಬಂದಿ ಮಧು ಎಂ ಅವರು, ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಮಾಡುತ್ತಿದ್ದಾಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಡೆಯಿಂದ ಜೆಎಂಐಟಿ ಕಡೆಗೆ ಹೋಗುವ ರಸ್ತೆಯಲ್ಲಿ ರಸ್ತೆಯಲ್ಲಿ ಸಂಚರಿಸುವವರಿಗೆ ತೊಂದರೆಯಾಗುವಂತೆ ಅಪಾಯಕಾರಿ ರೀತಿಯಲ್ಲಿ ಬೈಕಿನ ಹ್ಯಾಂಡಲ್ನಿಂದ ಎರಡೂ ಕೈ ಬಿಟ್ಟು ಸ್ಟಂಟ್ ಮಾಡಿ ವೀಡಿಯೋವನ್ನು ತನ್ನ ಇನ್ಸಟಾಗ್ರಾಂ ಖಾತೆಯಲ್ಲಿ ಸೆ.27 ರಂದು ಅಪ್ಲೋಡ್ ಮಾಡಿದ್ದ.
ಇದನ್ನೂ ಓದಿ: ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್ ಜೋಡೋ ಯಾತ್ರೆ | ಬಿ.ಕೆ.ಹರಿಪ್ರಸಾದ್
ಈ ವೀಡಿಯೋ ಗಮನಿಸಿದ ಪೊಲೀಸ್ ಸಿಬ್ಬಂದಿ ಮಧು, ಬೈಕ್ನ ಮಾಹಿತಿ ಪಡೆದು, ಬೈಕ್ ಸವಾರನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ದಾಖಲಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

