
CHITRADURGA NEWS | 08 JANUARY 2026
ಚಿತ್ರದುರ್ಗ: ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಜನವರಿ 14,15 ರಂದು ಹೊಳಲ್ಕೆರೆ ಪಟ್ಟಣದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ

ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿ, ಜಲಜೀವನ್ ಮಿಷನ್ ಯೋಜನೆಯಡಿ ಗೃಹ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಜೆಜೆಎಂ ಪೈಪ್‍ಲೈನ್ ಮೂಲಕವೇ ಪ್ರತಿ ಮನೆ ಮನೆಗೂ ನಳ ಸಂಪರ್ಕದ ಮೂಲಕ ಕುಡಿಯುವ ನೀರು ಸರಬರಾಜು ಮಾಡಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.
ಬೂದು ನೀರು ನಿರ್ವಹಣಾ ಕಾಮಗಾರಿ ಪರಿಶೀಲನೆ: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಬೂದು ನೀರು ನಿರ್ವಹಣಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿ.ಪಂ ಸಿಇಒ ಅವರು, ಬೂದು ನೀರು ನಿರ್ವಹಣಾ ಘಟಕದಲ್ಲಿ ಸಂಗ್ರಹಿಸುವ ತ್ಯಾಜ್ಯವನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಬೇಕು ಎಂದು ತಾಕೀತು ಮಾಡಿದರು.
15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯಿತಿ ಇತರೆ ಅನುದಾನದಿಂದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆಯಿಂದ ಬೇರೆ ಆಸ್ಪತ್ರೆಗೆ ರೋಗಿಗಳ ಶಿಫಾರಸ್ಸು ಬೇಡ | ಜಿಲ್ಲಾಧಿಕಾರಿ ಸೂಚನೆ
ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ, ಜೆ.ಎನ್.ಕೋಟೆ, ಗೋನೂರು, ಸಿದ್ದಾಪುರ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪರಿಶೀಲನೆ ಹಾಗೂ ಬೂದು ನೀರು ನಿರ್ವಹಣೆ ಕಾಮಗಾರಿಗಳ ವೀಕ್ಷಣೆ ಮಾಡಿದರು.
ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ಭೇಟಿ ವೇಳೆ ಗ್ರಾಮ ಪಂಚಾಯಿತಿ ಸುತ್ತ-ಮುತ್ತ ಸ್ವಚ್ಛತೆ, ಶೌಚಾಲಯ ನಿರ್ವಹಣೆ ಮಾಡಲು ಸೂಚಿಸಿದರು. ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆ.ಎನ್.ಕೋಟೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಪೌಷ್ಠಿಕ ಆಹಾರ ಮತ್ತು ಹಾಜರಾತಿ ಪರಿಶೀಲಿಸಿದರು.
ನಂತರ ಸಜ್ಜನಕೆರೆ ಗ್ರಾಮಕ್ಕೆ ಭೇಟಿ ನೀಡಿ, ಬೂದುನೀರು ನಿರ್ವಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ (ಇನ್‍ಲೈನ್ ಟ್ರಿಟ್‍ಮೆಂಟ್) ನಿರ್ಮಾಣದ ಕಾಮಗಾರಿಗಳನ್ನು ಪರಿಶೀಲಿಸಿದರು. ಇಂಗಳದಾಳ್, ಗೋನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಚಿಗನಾಳ್, ಮಲ್ಲಾಪುರ ಗ್ರಾಮದಲ್ಲಿ ಬೂದುನೀರು ನಿರ್ವಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ (ಇನ್‍ಲೈನ್ ಟ್ರಿಟ್‍ಮೆಂಟ್) ನಿರ್ಮಾಣದ ಕಾಮಗಾರಿಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ: ಕೃಷಿ ಹೊಂಡ ತೋಡಿಸಲು ರೈತರಿಂದ ಅರ್ಜಿ ಆಹ್ವಾನ
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ, ದಾಸ್ತಾನು ಕೊಠಡಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿದರು. ಸಿದ್ದಾಪುರ ಗ್ರಾಮಕ್ಕೆ ಭೇಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಅಡುಗೆ ಕೋಣೆಯ ಆಹಾರ ಪದಾರ್ಥಗಳು, ಶಾಲೆಯ ಸುತ್ತ-ಮುತ್ತ ಸ್ವಚ್ಛತೆ ಹಾಗೂ ಶೌಚಾಲಯ ನಿರ್ವಹಣೆ ಕುರಿತು ಮಾಹಿತಿ ಪಡೆದರು. ನಂತರ ಸಿದ್ದಾಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಕಾರ್ಯಪಾಲಕ ಅಭಿಯಂತರರಾದ ಅಮರನಾಥ್ ಜೈನ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವಮೂರ್ತಿ, ಚಿತ್ರದುರ್ಗ ತಾ.ಪಂ ಇಒ ವೈ.ರವಿಕುಮಾರ್, ಜಿಲ್ಲಾ ಐಇಸಿ ಸಮಾಲೋಚಕರಾದ ಬಿ.ಸಿ.ನಾಗರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
