
CHITRADURGA NEWS | 21 DECEMBER 2025
ಚಿತ್ರದುರ್ಗ: ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ | ಅರ್ಥಪೂರ್ಣ, ವಿಜೃಂಭಣೆ ಆಚರಣೆ | AC
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂಸದರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಸದರ ಅನುದಾನದಡಿಯಲ್ಲಿ ಕೈಗೊಂಡಿರುವ ಅನೇಕ ಅಭಿವೃದ್ಧಿ ಕಾಮಗಾರಿಗಳು ಕಳೆದ ನಾಲ್ಕೈದು ವರ್ಷಗಳಿಂದಲೂ ಬಾಕಿ ಇದ್ದು, ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಧೋರಣೆ ಬೇಡ:
ರೂ.5 ಲಕ್ಷ, ರೂ.8 ಲಕ್ಷ ಹಾಗೂ ರೂ.10 ಲಕ್ಷದ ಕಾಮಗಾರಿಗಳನ್ನು ಪೂರ್ಣಗೊಳಿಸಲು ವರ್ಷಗಟ್ಟಲೇ ಸಮಯಬೇಕಾ ಎಂದು ಪ್ರಶ್ನಿಸಿದ ಅಪರ ಜಿಲ್ಲಾಧಿಕಾರಿಗಳು, ಯಾವುದೇ ಕಾರಣಕ್ಕೂ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಧೋರಣೆ ಅನುಸರಿಸಬಾರದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಕಣ್ಮನ ಸೆಳೆದ ಮಕ್ಕಳ ಸಂತೆ | ಬೀದಿಯಲ್ಲಿ ಕುಳಿತು ತರಕಾರಿ ಮಾರಿ ಲೆಕ್ಕ ಕಲಿತ ಪೋರರು
ಕಾಮಗಾರಿ ಪ್ರಾರಂಭ ಮಾಡಲು ಸಾಧ್ಯವಾಗದಿದ್ದರೆ ಸಂಬಂಧಪಟ್ಟ ಅನುಷ್ಠಾನ ಏಜೆನ್ಸಿಗಳು ಅನುದಾನ ಹಿಂದುರಿಗಿಸಬೇಕು ಎಂದು ತಿಳಿಸಿದರು.
ನಿರ್ಲಕ್ಷೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷತೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಅನುಷ್ಠಾನ ಏಜೆನ್ಸಿಗಳಾದ ನಿರ್ಮಿತಿ ಕೇಂದ್ರ, ಕೆಆರ್‍ಡಿಎಲ್, ಪಿಆರ್‍ಇಡಿ, ಆರ್‍ಡಬ್ಲ್ಯೂಎಸ್ ಸಂಸ್ಥೆಯ ಮುಖ್ಯಸ್ಥರು ಕೆಳ ಹಂತದ ಸಿಬ್ಬಂದಿಯವರ ಪ್ರಗತಿ ಪರಿಶೀಲನೆ ನಡೆಸಿ, ತಮಗೆ ನೀಡಿರುವ ಕಾಮಗಾರಿಯ ಪ್ರತಿ ಹಂತದ ಮಾಹಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಬೇಕು. ಪ್ರತಿ ಕಾಮಗಾರಿಯ ಮಾಹಿತಿಯನ್ನು ಸಂಗ್ರಹಿಸಬೇಕು. ನಿಮ್ಮಗಳ ಹಂತದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಸಭೆಯ ನಡಾವಳಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಜನವರಿ 26ಕ್ಕೆ ದುರ್ಗಕ್ಕೆ ಭದ್ರಾ ನೀರು | ಕೆರೆಗಳಿಗೆ ಹರಿಯಲಿದ್ದಾಳೆ ಭದ್ರೆ
ಸಭೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಹರೀಶ್, ಪಿಆರ್‍ಇಡಿ ಕಾರ್ಯಪಾಲಕ ಇಂಜಿನಿಯರ್ ಹನುಮಂತಪ್ಪ, ಕೆಆರ್‍ಐಡಿಎಲ್ ಕಾರ್ಯಪಾಲಕ ಇಂಜಿನಿಯರ್‍ಗಳಾದ ಶಿವಪ್ರಕಾಶ್, ವಿನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೆದಾರ್ ಮಲ್ಲಿಕಾರ್ಜುನ್, ಪ್ರೋಗ್ರಾಮರ್ ವಿಶ್ವನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
