CHITRADURGA NEWS | 18 OCTOBER 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಕೃಷಿ ಬೆಳೆಗಳು ಒಣಗುತ್ತಿದ್ದು, ಕೃಷಿ ಮತ್ತು ಕಂದಾಯ ಇಲಾಖೆಗಳ ಸಿಬ್ಬಂದಿಗಳು ತಕ್ಷಣವೇ ಕ್ಷೇತ್ರ ಭೇಟಿ ನೀಡಿ ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ:
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಬೆಳೆ ಕಟಾವು ಪ್ರಯೋಗಗಳಿಗೆ ಸಂಬಂಧಿಸಿದಂತೆ ಯಾವುದೇ ಹಂತದಲ್ಲೂ ಲೋಪದೋಷಗಳು ಉಂಟಾಗದಂತೆ ಎಚ್ಚರ ವಹಿಸಬೇಕು. ನಮೂನೆ-1 ಮತ್ತು ನಮೂನೆ-2 ಪ್ರಕ್ರಿಯೆಗಳನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ನಮೂನೆ-1 ಪ್ರಕ್ರಿಯೆ ಪೂರ್ಣಗೊಂಡಿದ್ದು, ತಾತ್ಕಾಲಿಕ ದಿನಾಂಕಗಳಿಗೆ ಕಾಯದೆ ಒಣಗುತ್ತಿರುವ ಬೆಳೆಗಳ ವಾಸ್ತವ ಸ್ಥಿತಿಯನ್ನು ಆಧರಿಸಿ ತಕ್ಷಣವೇ ನಮೂನೆ-2 ಕಟಾವು ಪ್ರಯೋಗ ನಡೆಸಬೇಕು ಎಂದರು.
ತಾಲೂಕು ಮಟ್ಟದ ಅಧಿಕಾರಿಗಳು ಬೆಳೆ ಕಟಾವು ಪ್ರಯೋಗಗಳ ಮೇಲ್ವಿಚಾರಣೆ ನಡೆಸಬೇಕು. ತಮ್ಮ ಇಲಾಖೆಯ ಫೀಲ್ಡ್ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿ, ಸ್ವತಃ ಸ್ಥಳಕ್ಕೆ ಭೇಟಿ ನೀಡಿ ನಿಖರವಾದ ಇಳುವರಿ ಮಾಹಿತಿ ದಾಖಲಿಸುವಂತೆ ನೋಡಿಕೊಳ್ಳಬೇಕು. ಬೆಳೆಗಳ ಕಟಾವು ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ:
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ರವಿಕುಮಾರ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಸಾಂಖ್ಯಿಕ ಇಲಾಖೆಯ ಸಹಾಯಕ ನಿರ್ದೇಶಕಿ ಹೆಚ್.ಶಶಿರೇಖಾ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಅಶ್ವತ್ಥಾಮ, ವೀಣಾ, ಮಮತಾ, ನಜರೀನ್, ಸಾಂಖ್ಯಿಕ ನಿರೀಕ್ಷಕ ರಾಕೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

