CHITRADURGA NEWS | 10 JUNE 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ ಲಿಮಿಟೆಡ್ ಸಹಭಾಗಿತ್ವದಲ್ಲಿ ಇದೇ ಜೂನ್ 12ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕಾ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
Also Read: ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ BIRTHDAY ಆಚರಣೆ

ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ ಲಿ, ತಾಂತ್ರಿಕ ಮುಖ್ಯಸ್ಥ ಎಸ್.ಕುಮಾರ್ ಅವರು ಸಾವಯವ ಕೃಷಿಯ ಅಗತ್ಯತೆ ಮತ್ತು ಅನುಕೂ¯ಗಳು ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಬಗ್ಗೆ ವಿಷಯ ಮಂಡನೆ ಮಾಡುವರು.
ಭರಮಸಾಗರದ ಪ್ರಗತಿಪರ ರೈತರಾದ ಲೋಕೇಶ್ ಅವರು ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕೆಯ ತಮ್ಮ ಅನುಭವ ಹಂಚಿಕೊಳ್ಳುವರು ಹಾಗೂ ಕಾಂಪೋಷ್ಟ್ ಮಾಡುವ ಅಣು ಜೀವಿ ಗೊಬ್ಬರವನ್ನು ಬಳಸಿ ಪ್ರಾತ್ಯಕ್ಷಿಕೆಯ ಮೂಲಕ ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕೆಯ ವಿಧಾನವನ್ನು ತೋರಿಸಲಾಗುವುದು.
ಆದ ಪ್ರಯುಕ್ತ ಆಸಕ್ತ 70 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
Also Read: ಸೇಬು ಡಾರ್ಕ್ ಸರ್ಕಲ್‍ಗಳನ್ನು ನಿವಾರಿಸುತ್ತದೆಯೇ?
ಮೊದಲು ನೋಂದಾವಣಿ ಮಾಡಿಕೊಂಡ 70 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ.
ನೋಂದಾಯಿಸಿಕೊಂಡು ತರಬೇತಿಗೆ ಹಾಜರಾಗುವ ಆಸಕ್ತ ರೈತರಿಗೆ ತರಬೇತಿಯ ಕೊನೆಯಲ್ಲಿ ಕಾಂಪೋಷ್ಟ್ ಮಾಡುವ ಅಣು ಜೀವಿ ಗೊಬ್ಬರವನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
