CHITRADURGA NEWS | 08 MAY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಇದೇ ಮೇ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕಂಪ್ಯೂಟರ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಹಿರಿಯೂರು ನಗರಸಭೆ | ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು chitradurga.nic.in ನಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ತಮ್ಮ ಆಧಾರ್ ಕಾರ್ಡ್ ಹಾಗೂ ಆನ್‍ಲೈನ್ ಅರ್ಜಿ ಸಲ್ಲಿಕೆಯ ಸ್ವೀಕೃತಿ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಗ್ರಾ.ಪಂ. ಬಿಲ್ ಕಲೆಕ್ಟರ್ ಹುದ್ದೆ | ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
ನಿಗದಿತ ಸಮಯಕ್ಕೆ ಹಾಜರಾಗದ ಅಭ್ಯರ್ಥಿಗಳನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು chitradurga.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
