
CHITRADURGA NEWS | 03 December 2025
ಚಿತ್ರದುರ್ಗ: ಜಿಲ್ಲೆಯಲ್ಲಿರುವ ಅಪಘಾತ ವಲಯಗಳ ಜಂಟಿ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಫಘಾತಗಳನ್ನು ಇಳಿಮುಖಗೊಳಿಸಲು ಹಾಗೂ ಅಪಘಾತ ವಲಯಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಹೆದ್ದಾರಿ ಪಕ್ಕದ ಗೂಡಂಗಡಿ ವಿದ್ಯುತ್ ಕಡಿತಗೊಳಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಅಪಘಾತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹಂಪ್ಸ್, ಸೂಚನಾ ಫಲಕ, ಸಿಗ್ನಲ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡರೆ ಜನರ ಜೀವಗಳನ್ನು ಉಳಿಸಬಹುದಾಗಿದೆ ಹಾಗೂ ಅಪಘಾತಗಳ ಸಂಖ್ಯೆಯನ್ನು ಇಳಿಮುಖಗೊಳಿಸಲು ಸಹಕಾರಿಯಾಗಲಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
