
CHITRADURGA NEWS | 15 AUGUST 2024
ಚಿತ್ರದುರ್ಗ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ (SKB)ಅಭಿಮಾನಿ ಬಳಗದಿಂದ ನೂತನ ಸಂಸದ ಗೋವಿಂದ ಕಾರಜೋಳ ಅವರ ಅಭಿನಂದನಾ ಸಮಾರಂಭ ಚಿತ್ರದುರ್ಗ ನಗರದ ವೈಭವ್ ಗಾರ್ಡನ್ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಅಭಿನಂದನೆ ಸ್ವೀಕರಿಸಿದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ದೊರೆಯುತ್ತಿಲ್ಲ ಎಂದು ಶಾಸಕರು ದೆಹಲಿಗೆ ತೆರಳುತ್ತಿದ್ದಾರೆ. ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಒಳಗೆ ಒತ್ತಡ ಶುರುವಾಗಿದೆ ಎಂದರು.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಚಿತ್ರದುರ್ಗದಲ್ಲಿ ಜಯದೇವ ಹಾಸ್ಟೆಲ್ ಪುನರಾರಂಭ
ಈಗಾಗಲೇ ಕೆಲ ಶಾಸಕರು, ದೆಹಲಿಗೆ ತೆರಳಿ ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ಅವರು ಸುಭದ್ರ ಸರ್ಕಾರ ನಡೆಸುತ್ತಿದ್ದಾರೆ. ಜನರ ಒಳಿತಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದಾರೆ. ರೈತರಿಗೆ ಅನುಕೂಲ ಆಗುವಂತಹ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ, ಮುದ್ರಾ, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ನೀಡುತ್ತಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: RSS ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಜನಗಳ ಮಧ್ಯೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುವಂತೆ ಪ್ರೇರೇಪಿಸುತ್ತಿದ್ದಾರೆ.
ರಾಜ್ಯದ ಖಜಾನೆ ಲೂಟಿ ಮಾಡಿ ಎಸ್ಸಿ-ಎಸ್ಟಿ ಸಮುದಾಯದ ಹಣಗಳನ್ನ ದುರ್ಬಳಿಕೆ ಮಾಡಿಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಬಡವರ ಸರ್ಕಾರ ಎಂದು ಜನರನ್ನು ನಂಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.
ಗೋವಿಂದ ಕಾರಜೋಳ ಅವರ ಗೆಲುವು ಅಭೂತಪೂರ್ವ:
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ಸುಮಾರು 350 ಕಿ.ಮೀ ದೂರದಿಂದ ಬಂದಿರುವ ಗೋವಿಂದ ಕಾರಜೋಳ ಅವರ ಗೆಲುವು ಅಭೂತಪೂರ್ವಾದದ್ದು.
ಇದನ್ನೂ ಓದಿ: ಕರ್ನಾಟಕಕ್ಕೆ ಚಿತ್ರದುರ್ಗವೇ ನಂ.1 | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
ಜನರು ಹಣ ನೋಡಲಿಲ್ಲ. ಆದರೆ, ವ್ಯಕ್ತಿ ಮತ್ತು ವ್ಯಕ್ತಿಯ ಹಿಂದೆ ಇರುವ ಸರ್ಕಾರವನ್ನು ನೋಡಿ ಗೋವಿಂದ ಕಾರಜೋಳ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿ ಸಂಸತ್‍ಗೆ ಕಳಿಸಿದ್ದಾರೆ ಎಂದರು.
ಚಿತ್ರದುರ್ಗದಲ್ಲಿ ನನೆಗುದಿಗೆ ಬಿದ್ದಿರುವ ಭದ್ರಾ ಮೇಲ್ದಂಡೆ ಯೋಜನೆ, ರೈಲ್ವೆ ಯೋಜನೆ, ಕೈಗಾರಿಕೋದ್ಯಮ ಯೋಜನೆ, ಪ್ರವಾಸೋದ್ಯಮ ಹಾಗೂ ಕೇಂದ್ರೀಯ ವಿದ್ಯಾಲಯಕ್ಕೆ ಸಂಬಂಧಿಸಿದ ಮಂಜೂರಾತಿಗೆ ಸಂಸತ್ತಿನ ಮೊದಲ ಅಧಿವೇಶನದಲ್ಲೇ ಧ್ವನಿ ಎತ್ತಿದ ಧೀಮಂತ ರಾಜಕಾರಣಿ ಎಂದು ಶ್ಲಾಘಿಸಿದರು.
ಇದನ್ನೂ ಓದಿ: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್
ಸಂಸದರಿಗೆ ವಯಸ್ಸಾಗಿರಬಹುದು. ಆದರೆ, ಅವರ ನೆನಪಿನ ಶಕ್ತಿ ಮಿಂಚಿನಂತೆ ಕೆಲಸ ಮಾಡುತ್ತಿದೆ. ಜಿಲ್ಲೆಯ ಸಾಕಷ್ಟು ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಅವುಗಳ ಅಭಿವೃದ್ಧಿಗೆ ಈಗಾಗಲೇ ಪಣತೊಟ್ಟಿದ್ದಾರೆ ಇಂತಹ ನಾಯಕ ನಮ್ಮೊಡನೆ ಇರುವುದು ಸಂತಸದ ವಿಚಾರ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ಸಾಮಾನ್ಯರಲ್ಲಿ ಸಾಮಾನ್ಯ ನಾಯಕರಾಗಿ ಕೆಲಸ ಮಾಡುವ ಗೋವಿಂದ ಕಾರಜೋಳ ಅವರಂತಹ ಸಂಸದರು ನಮಗೆ ಸಿಕ್ಕಿರುವುದು ನಮ್ಮೆಲ್ಲರ ಭಾಗ್ಯ. ರಾಜಕಾರಣದಲ್ಲಿ ಅನುಭವಿ ರಾಜಕಾರಣಿ. ರಾಜ್ಯ ಮತ್ತು ಕೇಂದ್ರ ರಾಜಕಾರಣದಲ್ಲಿ ಅತ್ಯಂತ ಚಾಣಾಕ್ಷರಾಗಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರು ಇವರನ್ನು ಹಚ್ಚಿಕೊಂಡು ಮೆಚ್ಚಿಕೊಂಡು ಸಂಸದರನ್ನಾಗಿ ಮಾಡಿಕೊಂಡಿದ್ದಾರೆ ಎಂದರು.
ಇದನ್ನೂ ಓದಿ: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಟಿ.ಸುರೇಶ್, ಸಂಪತ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಜಿ.ಎಂ.ಸುರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಜಿಪಂ ಮಾಜಿ ಸದಸ್ಯರಾದ ಗುರುಸ್ವಾಮಿ, ಓಬಳೇಶ, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ರಾಮರೆಡ್ಡಿ, ಜಿಲ್ಲಾ ಮಹಿಳಾ ಕೋರ್ಚಾ ಅಧ್ಯಕ್ಷೆ ಶೈಲಜಾ ರೆಡ್ಡಿ, ನಗರಸಭೆ ಸದಸ್ಯ ಶಶಿಧರ್ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

