CHITRADURGA NEWS | 11 MAY 2026
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕ ಪಡೆದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಸಲ್ಲಿಸಲು ತಿಳಿಸಿದ್ದು, ಇಂತಹ ವಿದ್ಯಾರ್ಥಿಗಳನ್ನು ಕನ್ನಡ ಕುವರ / ಕನ್ನಡ ಕುವರಿ ಎನ್ನುವ ವಿಶೇಷ ಗೌರವ ಸಲ್ಲಿಸಲಾಗುವುದು.
ಗಣ್ಯರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಕುವರ / ಕನ್ನಡ ಕುವರಿ ಅಭಿನಂದನಾ ಪತ್ರ, ಕನ್ನಡ ಶಾಲು, ಸ್ಮರಣಿಕೆ ನೀಡಲಾಗುವುದು. ಅಂಕಪಟ್ಟಿಗಳನ್ನು ಅಪ್ಪಾಜಿ ಪರಿಸರ ಕಟ್ಟಡ, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಇಲ್ಲಿಗೆ ಕಳುಹಿಸಬಹುದಾಗಿದೆ.
ಇದನ್ನೂ ಓದಿ: ಡಾ.ಚಾಂದಿನಿ ಖಲೀದ್ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ
ಅಂಕಪಟ್ಟಿಗಳನ್ನು ಕಡ್ಡಾಯವಾಗಿ ಮೇ 12 ರವರೆಗೆ ಕಳಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9972155177, 94481124428, 9449759219, 9449510078 ಸಂಪರ್ಕಿಸಲು ಕೋರಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
