CHITRADURGA NEWS | 26 FEBRUARY 2026
ಚಿತ್ರದುರ್ಗ: ಭಾರತೀಯ ಅರೆಸೇನಾ ಪಡೆಯಲ್ಲಿ (ಸಿಆರ್‍ಪಿಎಫ್) ಸುದೀರ್ಘ 22 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸುತ್ತಿರುವ ಸಿ.ಹೆಚ್. ನಾಗಭೂಷಣ್ ಅವರಿಗೆ ಮಾರ್ಚ್ 03ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಶಿಕ್ಷಕಿ ಶೋಭಾ ಅವರಿಗೆ ರಾಷ್ಟ್ರಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ
ಅಭಿನಂದನಾ ಸಮಾರಂಭಕ್ಕೂ ಮುಂಚೆ ಕೂನಬೇವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿಆರ್‍ಪಿಎಫ್ ನಿವೃತ್ತ ಯೋಧ ಸಿ.ಹೆಚ್. ನಾಗಭೂಷಣ್ ಅವರನ್ನು ಮೆರವಣಿಗೆ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮಾದಾರ ಗುರುಪೀಠದ ಮಾದರ ಚನ್ನಯ್ಯ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎನ್.ಭೀಮಪ್ಪ ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಸಂಸದ ಗೋವಿಂದ ಎಂ.ಕಾರಜೋಳ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ತಮಿಳುನಾಡು ವಿರುಧನಗರದ ಜಿಲ್ಲಾಧಿಕಾರಿ ಕೂನಬೇವು ಗ್ರಾಮದ ಸುಖಪುತ್ರ. ಐಪಿಎಸ್ ಅಧಿಕಾರಿಗಳಾದ ರಂಜಿತ್ ಕುಮಾರ್ ಬಂಡಾರು, ರವಿ ಡಿ.ಚನ್ನಣ್ಣವರ್, ಡಿಡಿಪಿಐ ಎಂ.ಆರ್.ಮಂಜುನಾಥ್, ತುರುವನೂರು ಪೊಲೀಸ್ ಠಾಣೆ ಸಿಪಿಐ ಬಸವರಾಜ್ ಎಂ.ಪಾಟೀಲ್, ಸಿಪಿಐಗಳಾದ ಕೆ.ಎನ್.ವಿಶ್ವನಾಥ್, ಜಿ.ಬಿ.ಉಮೇಶ್, ಅರೆಸೇನಾ ಮಾಜಿ ಯೋಧರ ಸಂಘದ ಅಧ್ಯಕ್ಷ ಈ.ಲಿಂಗರಾಜು, ಉಪಾಧ್ಯಕ್ಷ ಡಿ.ಜಯಣ್ಣ, ಪ್ರಧಾನ ಕಾರ್ಯದರ್ಶಿ ವಿ.ರವಿಶಂಕರ್, ಖಜಾಂಚಿ ಜಿ.ಆರ್.ಮಂಜುನಾಥ್ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ಹಾಲಿ ಮತ್ತು ಮಾಜಿ ವೀರಯೋಧರಿಗೆ ಸನ್ಮಾನ ಮಾಡಲಾಗುವುದು. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣಾ ಕಾರ್ಯಕ್ರಮವಿದೆ.
ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ | ಅರ್ಜಿ ಆಹ್ವಾನ
ಸುಮಾರು ಎರಡು ದಶಕಗಳ ಕಾಲ ಕುಟುಂಬದಿಂದ ದೂರವಿದ್ದು, ದೇಶದ ರಕ್ಷಣೆಗಾಗಿ ಶ್ರಮಿಸಿದ ನಾಗಭೂಷಣ್ ಅವರು ಇದೀಗ ನಿವೃತ್ತರಾಗಿ ಸ್ವಗ್ರಾಮಕ್ಕೆ ಮರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಸೇರಿ ಅವರಿಗೆ ಹೃದಯಸ್ಪರ್ಶಿ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
