ಚಿತ್ರದುರ್ಗ ನ್ಯೂಸ್.ಕಾಂ: ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ನಮ್ಮ ಶಾಸಕರಾದ ಕೆ.ಸಿ.ವೀರೇಂದ್ರ ಅವರು ಮುಂದಾಳತ್ವವನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ ಎಲ್ಲ ಧರ್ಮ, ಜಾತಿಗಳ ಜೊತೆ ಸೌಜಾರ್ದತೆ ಬಯಸುತ್ತದೆ. ಹಾಗಾಗಿ ನಾವು ಮಂದಿರ, ಮಸೀದಿ, ಚರ್ಚ್ ಎಲ್ಲ ಕಡೆ ಹೋಗುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜಾತ್ಯಾತೀತ ಪಕ್ಷ, ದೇವಸ್ಥಾನ, ಮಸೀದಿ, ಚರ್ಚ್ ಎಲ್ಲ ಕಡೆ ನಾವು ಹೋಗುತ್ತೇವೆ. ಅದೇ ರೀತಿ ಹಿಂದೂ ಮಹಾಗಣಪತಿ ಬಳಿ ತೆರಳುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಕಾಂಗ್ರೆಸ್ ಮುಖಂಡರಾದ ಜಿ.ಎಸ್.ಮಂಜುನಾಥ್, ಹಾಲಸ್ವಾಮಿ, ಮಾಜಿ ಎಂಎಲ್ಸಿ ಜಯಮ್ಮ, ಬಿ.ಟಿ.ಜಗದೀಶ್, ಕೆ.ಪಿ.ಸಂಪತ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಬಾಲರಾಜ್, ಡಿ.ಎನ್.ಮೈಲಾರಪ್ಪ, ಜಯ್ಯಣ್ಣ, ಲಕ್ಷ್ಮೀಕಾಂತ್, ಪ್ರಕಾಶ್, ಗೀತಾ ನಂದಿನಿಗೌಡ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

