ಚಿತ್ರದುರ್ಗ ನ್ಯೂಸ್.ಕಾಂ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಈಗಾಗಲೇ ಆಕಾಂಕ್ಷಿಗಳು ಕಾಲಿಗೆ ರೆಕ್ಕೆ ಕಟ್ಟಿಕೊಂಡವರಂತೆ ಕ್ಷೇತ್ರ ಪ್ರವಾಸ ಆರಂಭಿಸಿದ್ದಾರೆ. ಮತ್ತೆ ಕೆಲವರು ಟಿಕೇಟ್ಗಾಗಿ ವರಿಷ್ಟರ ದುಂಬಾಲು ಬಿದ್ದಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರು-ಸ್ಥಳೀಯರು ಎನ್ನುವ ದೊಡ್ಡ ಚರ್ಚೆ ಸೃಷ್ಟಿಯಾಗಿದೆ. ಸ್ಥಳೀಯರಿಗೆ ಟಿಕೇಟ್ ನೀಡಿ ಎಂದು ಒಂದು ಗುಂಪು ಈಗಾಗಲೇ ಎಲ್ಲೆಡೆ ಪ್ರಚಾರ ಆರಂಭಿಸಿದೆ. ಪಕ್ಷದ ವರಿಷ್ಠರಿಗೂ ಇದರ ಬಿಸಿ ನಿಧಾನಕ್ಕೆ ತಟ್ಟುತ್ತಿದೆ.
ಕಾಂಗ್ರೆಸ್ ಈಗಾಗಲೇ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ತಂತ್ರಗಳಿಗೆ ಸಂಬಂಧಿಸಿ ಪ್ರತಿ ಕ್ಷೇತ್ರಕ್ಕೂ ವೀಕ್ಷಕರನ್ನು ನೇಮಕ ಮಾಡಿದೆ.
ಇದನ್ನೂ ಓದಿ: ಚಿತ್ರದುರ್ಗ ಲೋಕಸಭೆ ಚುನಾವಣೆ | ಅಖಾಡಕ್ಕಿಳಿದ ಆರ್.ಬಿ.ತಿಮ್ಮಾಪುರ ಅಂಡ್ ಸನ್
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರನ್ನು ನೇಮಿಸಿದ್ದು, ವೀಕ್ಷಕರಾಗಿ ಮೊದಲ ಬಾರಿಗೆ ಇಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮಾಜಿ ಸಚಿವರಾದ ಎಚ್.ಆಂಜನೇಯ, ಟಿ.ಬಿ.ಜಯಚಂದ್ರ, ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಭಾಷಾ, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಕುಶಲಕರ್ಮಿಗಳ ವಿಭಾಗದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ(ಪಪ್ಪಿ), ಪಾವಗಡ ಶಾಸಕ ಬಿ.ಟಿ.ವೆಂಕಟೇಶ್, ಮಾಜಿ ಶಾಸಕ ಎ.ವಿ.ಉಮಾಪತಿ, ಮುಖಂಡ ಬಿ.ಸೋಮಶೇಖರ್, ಮಾಜಿ ಎಂಎಲ್ಸಿ ಜಯಮ್ಮ ಬಾಲರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಪ್ಪ, ಮಾಜಿ ಎಂಎಲ್ಸಿ ರಮೇಶ್ ಬಾಬು, ಆಗ್ನೇಯ ಶಿಕ್ಷಕದ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಸೇರಿದಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

