CHITRADURGA NEWS | 23 MAY 2024
ಚಿತ್ರದುರ್ಗ: ಮಾಜಿ ಮಂತ್ರಿ ಹೆಚ್.ಆಂಜನೇಯ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಆರ್.ಕೃಷ್ಣಮೂರ್ತಿ ಒತ್ತಾಯಿಸಿದರು.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ಅವರ ಕೊಡುಗೆ ಅಪಾರವಾದದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಹೆಚ್..ಆಂಜನೇಯ ಅವರು ಕೂಡ ಒಬ್ಬರಾಗಿದ್ದಾರೆ. ಸೋಲು ಗೆಲುವು ಎರಡನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿದ್ದಾರೆ. ನಿರಂತರವಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಚಳ್ಳಕೆರೆ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ | ₹ 30 ಲಕ್ಷಕ್ಕೆ ಮುಕ್ತಿ ಬಾವುಟ ಪಡೆದ ಶಾಸಕ ವೀರೇಂದ್ರ ಪಪ್ಪಿ
ಹೀಗಾಗಿ ಅವರ ಪರಿಶ್ರಮವನ್ನು ಪರಿಗಣಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಹಾಗೂ ವರಿಷ್ಠರು ಹೆಚ್. ಆಂಜನೇಯ ಅವರಿಗೆ ಎಂಎಲ್ಸಿ ಸ್ಥಾನವನ್ನು ನೀಡುವಂತೆ ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದರು.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ, ಔಷಧಿ ಲಭ್ಯ
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರುಗಳಾದ ಬಿ.ಪಿ.ಪ್ರಕಾಶ ಮೂರ್ತಿ, ಆರ್. ನರಸಿಂಹ ರಾಜು, ಬಿ.ಕೆ.ಶಿವಮೂರ್ತಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
