
ಚಿತ್ರದುರ್ಗ ನ್ಯೂಸ್.ಕಾಂ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಸಭೆ ನಡೆಸಲು ವೀಕ್ಷಕರಾಗಿ ಡಾ.ಎಚ್.ಸಿ.ಮಹಾದೇವಪ್ಪ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಒನಕೆಓಬವ್ವ ವೃತ್ತ ಗಿಜಿಗುಡುತ್ತಿದೆ. ಲೋಕಸಭೆ ಟಿಕೇಟ್ ಆಕಾಂಕ್ಷಿಗಳು ತಮ್ಮ ಬೆಂಬಲಿಗರೊಂದಿಗೆ ಆಗಮಿಸುತ್ತಿದ್ದು, ಸಾವಿರಾರು ಜನ ನೆರೆದಿದ್ದಾರೆ.
ಪಟಾಕಿ, ಬ್ಯಾಂಡ್ ಸೇರಿದಂತೆಕಲಾ ತಂಡಗಳೊಂದಿಗೆ ಆಗಮಿಸುತ್ತಿರುವ ಆಕಾಂಕ್ಷಿಗಳು ವೀಕ್ಷಕರ ಎದುರು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.

ಜನ ಹೆಚ್ಚು ಸೇರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಡಿಸಿ ಕಚೇರಿ ಕಡೆಗೆ ಬರುತ್ತಿರುವ ಎಲ್ಲಾ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿದ್ದಾರೆ.
ಕೋರ್ಟ್ ರಸ್ತೆ, ಮದಕರಿ ವೃತ್ತದಿಂದ ಡಿಸಿ ಕಚೇರಿ ಮಾರ್ಗ, ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ, ಡಿಸಿ ನಿವಾಸದ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ವಾಹನ ತಡೆಯುತ್ತಿದ್ದಾರೆ.
ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಮಹಾದೇವಪ್ಪ ಅವರಿಗೆ ಕಾಯುತ್ತಿದ್ದಾರೆ.
ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಬಿ.ಎನ್.ಚಂದ್ರಪ್ಪ, ಪಿ.ರಘು, ವಿನಯ ತಿಮ್ಮಾಪುರ, ಹನುಮಂತಪ್ಪ ಗೋಡೆಮನೆ, ಪಾವಗಡ ಕುಮಾರಸ್ವಾಮಿ, ಎಂ.ರಾಮಪ್ಪ, ಸುನೀಲ್ ಕುಮಾರ್ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
