
CHITRADURGA NEWS | 19 AUGUST 2024
ಚಿತ್ರದುರ್ಗ: ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ರಾಜ್ಯಪಾಲರ ಅಸ್ತ್ರ ಬಳಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕ ಸೋಮವಾರ ಹೆದ್ದಾರಿ ಸಂಚಾರ ತಡೆ ನಡೆಸಿತು.
ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಕೈ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು. ಬಳಿಕ ಟೈಯರ್‌ಗೆ ಬೆಂಕಿ ಹಚ್ಚಿ, ರಾಜ್ಯಪಾಲರು ಸತ್ತು ಹೋದ್ರು ಅಂತಾ ಬಾಯಿ ಬಡಿದು ಕೊಂಡು ರಾಜ್ಯಪಾಲ ಥಾವರ ಚಂದ್ ಗೆಹಲೋತ್, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿದರು.
ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಅಧಿಕಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಮುಡಾ ಹಗರಣದ ಆರೋಪ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಅವರ ಪತ್ನಿ ಜಮೀನನ್ನು ಸಹೋದರನಿಂದ ದಾನವಾಗಿ ಪಡೆದಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ಕೈವಾಡ ಇಲ್ಲ. ಬೇಕಾದರೆ ನಿವೇಶನಗಳನ್ನು ವಾಪಸ್ ಪಡೆಯಲಿ. ಆದರೆ, ಬಿಜೆಪಿಯವರು ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಕ್ಲಿಕ್ ಮಾಡಿ ಓದಿ: ತಡರಾತ್ರಿ ಚಿರತೆಯ ಅಟ್ಟಹಾಸ | ಬೆಚ್ಚಿದ ಗ್ರಾಮಸ್ಥರು
ಮುಖ್ಯಮಂತ್ರಿಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಲು ಬಿಜೆಪಿ ಯತ್ನಿಸುತ್ತಿದೆ. ಮುಡಾದಿಂದ ನಿವೇಶನ ಹಂಚಿಕೆ ಮಾಡಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರಲಿಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು, ಬಿಜೆಪಿಯವರೇ ಮುಡಾ ಅಧ್ಯಕ್ಷರಾಗಿದ್ದರು. ಕಾನೂನಾತ್ಮಕವಾಗಿ ಯಾವುದೇ ಆಧಾರ ಇಲ್ಲದಿದ್ದರೂ ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಆರೋಪಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
