
CHITRADURGA NEWS | 17 AUGUST 2024
ಚಿತ್ರದುರ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ‘ಗೋ ಬ್ಯಾಕ್’ ಘೋಷಣೆ ಕೂಗಿ ಆಕ್ರೋಶ ಹಾಕಿತು.
ಜಿಲ್ಲಾಧಿಕಾರಿ ಕಚೇರಿ ಸಮೀಪ ಶನಿವಾರ ಪ್ರತಿಭಟನೆ ನಡೆಸಿ ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರನ್ನು ತುಳಿಯಲು ಕೇಂದ್ರದ ಎನ್‌ಡಿಎ ಸರ್ಕಾರ ಯತ್ನಿಸುತ್ತಿದೆ. ರಾಜ್ಯದಲ್ಲಿ ರಾಜಭವನವನ್ನು ರಾಜ್ಯಪಾಲರು ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಕ್ಲಿಕ್ ಮಾಡಿ ಓದಿ: ತಡರಾತ್ರಿ ಚಿರತೆಯ ಅಟ್ಟಹಾಸ | ಬೆಚ್ಚಿದ ಗ್ರಾಮಸ್ಥರು

ಕಾಂಗ್ರೆಸ್ ಮುಖಂಡರಾದ ಬಿ.ಟಿ.ಜಗದೀಶ್, ಸಿ.ಟಿ.ಕೃಷ್ಣಮೂರ್ತಿ, ಎಚ್.ಮಂಜಪ್ಪ, ಸಂಪತ್ ಕುಮಾರ್, ಖುದ್ದೂಸ್, ಪ್ರಕಾಶ್ ರಾಮನಾಯ್ಕ್ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
