By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Congress: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು | ಸಿದ್ದರಾಮಯ್ಯರ ಜನಪರ ಆಡಳಿತಕ್ಕೆ ಜನ ಬೆಂಬಲ | ಎಚ್.ಆಂಜನೇಯ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Congress: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು | ಸಿದ್ದರಾಮಯ್ಯರ ಜನಪರ ಆಡಳಿತಕ್ಕೆ ಜನ ಬೆಂಬಲ | ಎಚ್.ಆಂಜನೇಯ 

ಮುಖ್ಯ ಸುದ್ದಿ

Congress: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು | ಸಿದ್ದರಾಮಯ್ಯರ ಜನಪರ ಆಡಳಿತಕ್ಕೆ ಜನ ಬೆಂಬಲ | ಎಚ್.ಆಂಜನೇಯ 

News Desk Chitradurga News
Last updated: 23 November 2024 18:48
News Desk Chitradurga News
7 months ago
Share
H. Anjaneya
ಎಚ್‌.ಆಂಜನೇಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 NOVEMBER 2024

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರ ಜನಪರ ಆಡಳಿತಕ್ಕೆ ಜನ ಬೆಂಬಲದಿಂದ ಉಪಚುನಾವಣೆ(by-election)ಯಲ್ಲಿ ಕಾಂಗ್ರೆಸ್ (Congress) 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ

ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ ಮುನ್ನೆಲೆಗೆ ತಂದ ಪ್ರತಿಪಕ್ಷಗಳ ನಡೆಗೆ ಜನಾಕ್ರೋಶ ಮೂರು ಉಪ ಚುನಾವಣೆಯಲ್ಲಿ ಹೊರಬಿದ್ದಿದೆ.

ಅಹಿಂದ ವರ್ಗದ ಹಿತ ಸದಾ ಬಯಸುವ ಸಿದ್ದರಾಮಯ್ಯ, ಎಲ್ಲ ಸಮುದಾಯದ ಹಿತಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ಸು ಕಂಡಿದ್ದಾರೆ.

ರಾಜ್ಯದಲ್ಲಿನ ಮೂರು ಕ್ಷೇತ್ರಗಳಲ್ಲಿನ ಗೆಲುವು ಸಿದ್ದರಾಮಯ್ಯ ಅವರ ನಾಯಕತ್ವದ ಕಿರೀಟಕ್ಕೆ ಮತ್ತೊಂದು ಗರಿ ಆಗಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನಗತ್ಯ ಆರೋಪ, ಮಾಡುತ್ತಿದ್ದವರಿಗೆ ಜನರೇ ಉತ್ತರ ಕೊಟ್ಟಿದ್ದಾರೆ.

ಕ್ಲಿಕ್ ಮಾಡಿ ಓದಿ: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ

ಮುಡಾ ಹೆಸರಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಸುದ್ದಿ ಹರಡಿ, ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡುವ ಯತ್ನ ಹಾಗೂ ಅಹಿಂದ ನಾಯಕನೊಬ್ಬ ಎರಡನೇ ಬಾರಿ ಸಿಎಂ ಆಗಿ ಅವಧಿ ಪೂರ್ಣಗೊಳಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುವ ಪ್ರತಿಪಕ್ಷಗಳ ಷಡ್ಯಂತ್ರವನ್ನು ಸಹಿಸಿಕೊಳ್ಳುವುದಿಲ್ಲವೆಂಬ ಸಂದೇಶವನ್ನು ಮತದಾರರೇ ರವಾನಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ನಡೆಸಿ ಅಧಿಕಾರದಿಂದ ಕೆಳಗಿಸುವ ಕುತಂತ್ರಕ್ಕೆ ಅಹಿಂದ ವರ್ಗದ ಜನರು ಸಿಡಿದೆದ್ದು, ರಾಜ್ಯದಲ್ಲಿ ಮತ್ತಷ್ಟು ಗಟ್ಟಿಗೊಂಡಿದ್ದಾರೆ. ಅದರ ಫಲವೇ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚು ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ರಾಜ್ಯದಲ್ಲಿ ಅಹಿಂದ ಮತಗಳು ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಂತುಕೊಂಡಿದ್ದು, ಜತೆಗೆ ವೀರಶೈವ ಲಿಂಗಾಯಿತ, ಒಕ್ಕಲಿಗ ಮತಗಳನ್ನು ಕೂಡ ಕಾಂಗ್ರೆಸ್ ಪಕ್ಷ ಪಡೆದುಕೊಳ್ಳುವಲ್ಲಿ ಯಶಸ್ಸು ಕಂಡಿದೆ. ಜತೆಗೆ ಶಿಗ್ಗಾವಿ, ಸಂಡೂರಲ್ಲಿ ಹೆಚ್ಚು ಸಂಖ್ಯೆಯಲ್ಲಿರುವ ಮಾದಿಗ ಸಮುದಾಯವು ಕೂಡ ಕೈಹಿಡಿದಿರುವುದು ಪಕ್ಷದ ಗೆಲುವಿಗೆ ಸಹಕಾರಿ ಆಗಿದೆ ಎಂದಿದ್ದಾರೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಈ ಗೆಲುವಿನ ಮೆರವಣಿಗೆ ಮುಂಬರುವ ಬಿಬಿಎಂಪಿ, ಜಿಲ್ಲಾ, ತಾಲೂಕು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮುಂದುವರಿಯಲಿದೆ. ಪ್ರತಿಪಕ್ಷಗಳು ಈಗಲಾದರೂ ಸೋಲು ಒಪ್ಪಿಕೊಂಡು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ವಕ್ಫ್ ಮಂಡಳಿ ಆದೇಶ, ಕೇಂದ್ರ ಸರ್ಕಾರದ ಸೂಚನೆ ಕಾರಣಕ್ಕೆ ರಾಜ್ಯದಲ್ಲಿ ಅನೇಕರ ಬಿಪಿಎಲ್ ಪಡಿತರ ಚೀಟಿ ರದ್ದು ವಿಷಯವನ್ನು ಕಾಂಗ್ರೆಸ್ ಪಕ್ಷವೇ ನಡೆಸಿದೆ ಎಂದು ಸುಳ್ಳು ಆರೋಪ ಮಾಡಿ, ಜನರನ್ನು ಎತ್ತಿಕಟ್ಟುವ ಯತ್ನಕ್ಕೆ ಮತದಾರ ಸೊಪ್ಪು ಹಾಕಿಲ್ಲ. ಸತ್ಯವನ್ನಷ್ಟೇ ನಾವು ಒಪ್ಪಿಕೊಳ್ಳುವುದು ಎಂಬ ಸಂದೇಶ ಮತದಾರರು ನೀಡಿದ್ದಾರೆ.

 ಜಾತಿ-ಧರ್ಮಗಳ ಮಧ್ಯೆ ಕಂದಕ ಸೃಷ್ಟಿಸುವ ಪ್ರಯತ್ನ ಹಾಗೂ ಸುಳ್ಳು ಸುದ್ದಿಗಳನ್ನು ಹರಡಿ ಉತ್ತಮವಾಗಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಕಳಂಕ ತರುವ ಷಡ್ಯಂತ್ರ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಎಲ್ಲ ರಾಜಕೀಯ ಪಕ್ಷಗಳು ಸಿದ್ದರಾಮಯ್ಯ ನಾಯಕತ್ವದ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಎಚ್. ಆಂಜನೇಯ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPBy-ElectionChitradurgaChitradurga newsChitradurga UpdatescongressfeaturedH.AnjaneyaKannada Latest NewsKannada NewsSiddaramaiahwinಉಪಚುನಾವಣೆಎಚ್.ಆಂಜನೇಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಗೆಲುವುಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಫೀಚರ್ಡ್ಬಿಜೆಪಿಸಿದ್ದರಾಮಯ್ಯ
Share This Article
Facebook Email Print
Previous Article Dr.Shivaraj kumar ranagal tour Hatric Hero: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ
Next Article ಬಜರಂಗದಳದಿಂದ ರಕ್ತದಾನ ಶಿಬಿರ Blood: ಅಯೋಧ್ಯ ಬಲಿದಾನ ದಿವಸ್ | ಬಜರಂಗದಳದಿಂದ ರಕ್ತದಾನ ಶಿಬಿರ 
Leave a Comment

Leave a Reply Cancel reply

Your email address will not be published. Required fields are marked *

ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up