
CHITRADURGA NEWS | 18 DECEMBER 2025
ಚಿತ್ರದುರ್ಗ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾಗಾಂಧಿ, ರಾಹುಲ್‍ಗಾಂಧಿ ವಿರುದ್ದ ಬಿಜೆಪಿ ಪಿತೂರಿ ನಡೆಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ್ದನ್ನು ಪೊಲೀಸರು ತಡೆದಾಗ ಪ್ರತಿಭಟನಾಕಾರರು ಸಿಟ್ಟಿಗೆದ್ದು, ನೂಕಾಟದಲ್ಲಿ ತೊಡಗಿದರು.
ಇದನ್ನೂ ಓದಿ: ಸರ್ಕಾರದ ವಿಧೇಯಕಕ್ಕೆ ಭೋವಿ ಶ್ರೀ ವಿರೋಧ | ಕರ್ನಾಟಕ ಅನುಸೂಚಿತ ಜಾತಿಗಳ ವಿಧೇಯಕ 2025
ಕೆಲವರು ಬ್ಯಾರಿಕೇಡ್‍ಗಳನ್ನು ಹತ್ತಿ ಒಳ ನುಗ್ಗಲು ಬಂದಾಗ ಪೊಲೀಸರು ವಿಫಲಗೊಳಿಸಿದ್ದರಿಂದ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಕಾಳಿಕಾಂಭ ದೇವಸ್ಥಾನದ ಸಮೀಪದಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತಿಗೆ ಹಾಕುವುದಕ್ಕಿಂತ ಮುಂಚೆಯೇ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ಪೊಲೀಸರು ಕಾಯುತ್ತಿದ್ದರು. ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು ಬ್ಯಾರಿಕೇಡ್‍ಗಳನ್ನು ಏರಿ ಒಳ ನುಸುಳಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ.

ಮಾಜಿ ಸಚಿವ ಹೆಚ್.ಆಂಜನೇಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಮೊದಲಿನಿಂದಲೂ ನೆಹರು, ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್‍ಗಾಂಧಿ ವಿರುದ್ದ ಸೇಡಿನ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಅವನತಿಯ ಕಾಲ ಸಮೀಪಿಸುತ್ತಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್‍ಗೆ ತ್ಯಾಗ ಬಲಿದಾನದ ಇತಿಹಾಸವಿದೆ. ವಾಮ ಮಾರ್ಗದಲ್ಲಿ ಅಧಿಕಾರವಿಡಿದಿರುವ ಕೋಮುವಾದಿ ಬಿಜೆಪಿ ದೇಶದ ಜನರ ಹಿತ ಕಾಯುವ ಬದಲು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿಯನ್ನು ಸಿಲುಕಿಸಲು ಕುತಂತ್ರ ನಡೆಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆಂದರು.
ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದರು ಬಿಜೆಪಿ. ದ್ವೇಷದ ರಾಜಕಾರಣ ಮಾಡುತ್ತ ಕಾಲ ಕಳೆಯುತ್ತಿದ್ದು, ಕಾಂಗ್ರೆಸ್ ನಾಯಕರುಗಳನ್ನು ಗುರಿಯಾಗಿಸಿಕೊಂಡು ಇಲ್ಲ ಸಲ್ಲದ ಆಪಾದನೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಉಗ್ರ ಹೋರಾಟ ನಡೆಯಲಿದೆ ಎಂದು ಹೆಚ್.ಆಂಜನೇಯ ಎಚ್ಚರಿಸಿದರು.
ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ | ಇಬ್ಬರು ಮಹಿಳೆಯರ ರಕ್ಷಣೆ
ಪ್ರತಿಭಟನೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತ ನಂದಿನಿಗೌಡ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
