Connect with us

    ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ | ಜಿಪಂ ಸಿಇಒ ಎಸ್‌.ಜೆ.ಸೋಮಶೇಖರ್‌ ಸೂಚನೆ

    zp ceo

    ಮುಖ್ಯ ಸುದ್ದಿ

    ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ | ಜಿಪಂ ಸಿಇಒ ಎಸ್‌.ಜೆ.ಸೋಮಶೇಖರ್‌ ಸೂಚನೆ

    CHITRADURGA NEWS | 29 MAY 2024
    ಚಿತ್ರದುರ್ಗ: ಜಿಲ್ಲೆಯ ಶಾಲೆ, ಆಸ್ಪತ್ರೆ, ಅಂಗನವಾಡಿ, ವಿದ್ಯಾರ್ಥಿ ನಿಲಯಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಜೆ.ಸೋಮಶೇಖರ್‌ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಜಲ ಜೀವನ್‌ ಮಿಷನ್‌ ಯೋಜನೆಯಡಿ ಮನೆ-ಮನೆಗೆ ಕಾರ್ಯಾತ್ಮಕ ನಳ ನೀರು ಸಂಪರ್ಕಿಸುವ ವೇಳೆ, ಗ್ರಾಮಾಂತರ ಪ್ರದೇಶದಲ್ಲಿನ ಶಾಲೆ, ಆಸ್ಪತ್ರೆ, ಅಂಗನವಾಡಿ, ಹಾಸ್ಟೆಲ್‌ಗಳಿಗೆ ತಪ್ಪದೇ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸದಂತೆ’ ಎಚ್ಚರಿಸಿದರು.

    ಕ್ಲಿಕ್ ಮಾಡಿ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಕೀಲು,‌‌ ಮೂಳೆ ಆಪರೇಷನ್ ಇನ್ ಪ್ಲಾಂಟ್ಸ್ ಉಚಿತ

    ‘ಜಿಲ್ಲೆಯ ಬರ ಪೀಡಿತ ತಾಲ್ಲೂಕುಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಪ್ರತಿ ತಾಲ್ಲೂಕುಗಳಿಗೆ ಮೊದಲ ಹಂತದಲ್ಲಿ ರೂ.25 ಲಕ್ಷದಂತೆ ಒಟ್ಟು ರೂ.150 ಲಕ್ಷ, ಎರಡನೇ ಹಂತದಲ್ಲಿ ರೂ. 20 ಲಕ್ಷದಂತೆ ಒಟ್ಟು ರೂ.120 ಲಕ್ಷ, ಮೂರನೇ ಹಂತದಲ್ಲಿ ರೂ. 60.69 ಲಕ್ಷದಂತೆ ಒಟ್ಟು ರೂ.364.15 ಲಕ್ಷ ಮಂಜೂರು ಮಾಡಿದೆ. ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ ರೂ.150 ಲಕ್ಷಗಳಿಗೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸರಬಾರಜಿಗೆ ಸಂಬಂಧಿಸಿದಂತೆ ಒಟ್ಟು 94 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ’ ಎಂದರು.

    ಎರಡನೇ ಹಂತದಲ್ಲಿ ಮಂಜೂರಾದ ರೂ.120 ಲಕ್ಷಗಳಿಗೆ ಆರು ತಾಲ್ಲೂಕುಗಳಿಂದ ಒಟ್ಟು 88 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸಭೆಯ ಅನುಮೋದನೆ ಮಂಡಿಸಲಾಯಿತು. ಜಿಲ್ಲೆಗೆ ಮಂಜೂರಾದ ರೂ.364.15 ಲಕ್ಷಕ್ಕೆ ಸಂಬಂಧಿಸಿದಂತೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಹಾಗೂ ಇತರೆ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಹೊಸ ಪೈಪ್ ಲೈನ್ ಅಳವಡಿಕೆಗೆ ರೂ.60.60 ಲಕ್ಷ ವೆಚ್ಚದ 10 ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಸಭೆಯ ಮುಂದೆ ಮಂಡಿಸಲಾಯಿತು.

    ಕ್ಲಿಕ್ ಮಾಡಿ ಓದಿ: ಮೇ 30 ರಂದು ವಿದ್ಯುತ್ ವ್ಯತ್ಯಯ

    ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್‌, ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸೀರ್‍ವುದ್ದೀನ್‌, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಆರೋಗ್ಯ ಇಲಾಖೆ ಡಾ.ಚಂದ್ರಶೇಖರ್‌ ಕಂಬಾಳಿ ಮಠ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top