CHITRADURGA NEWS | 25 NOVEMBER 2025
ಚಿತ್ರದುರ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹೊಳಲ್ಕೆರೆ ತಾಲ್ಲೂಕು ಘಟಕದ ವತಿಯಿಂದ ಮಕ್ಕಳ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಕಸಾಪ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 25 | ಹತ್ತಿ ರೇಟ್ ಎಷ್ಟಿದೆ?
ಕಸಾಪ ಪದಾಧಿಕಾರಿಗಳ ತಂಡ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಆಕಾಶ್, ಡಿಡಿಪಿಐ ಎಂ.ಆರ್. ಮಂಜುನಾಥ್ ಅವರನ್ನು ಭೇಟಿಯಾಗಿ ಸಮ್ಮೇಳನಕ್ಕೆ ಅಗತ್ಯ ಸಲಹೆ, ಸಹಕಾರ ನೀಡುವಂತೆ ಕೋರಿದರು.
ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದು ಪ್ರಥಮ ವಿಶೇಷ ಪ್ರಯತ್ನವಾಗಿದ್ದು, ಡಿಸೆಂಬರ್ ಕೊನೆಯ ಅಥವಾ ಜನವರಿ ಮೊದಲ ವಾರದಲ್ಲಿ ಸಮ್ಮೇಳನ ಆಯೋಜಿಸಲು ಸಿದ್ದತೆ ಕೈಗೊಳ್ಳಲಾಗಿದೆ ಎಂದರು.
ಈವರೆಗೆ ಸಮ್ಮೇಳನಗಳು ಕೇವಲ ಹಿರಿಯರು, ಶಿಕ್ಷಕರು, ಕವಿಗಳು ಮತ್ತು ಚಿಂತಕರಿಗೆ ಸೀಮಿತವಾಗಿದ್ದವು. ಆದರೆ, ಇಂದಿನ ವಿದ್ಯಾರ್ಥಿಗಳು ಕನ್ನಡದ ಕಲಿಕೆ ಮತ್ತು ಸಾಹಿತ್ಯದಲ್ಲಿ ಹೆಚ್ಚು ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರಥಮ ಮಕ್ಕಳ ಸಮ್ಮೇಳನಕ್ಕೆ ಕಸಾಪ ಮುಂದಾಗಿದೆ ಎಂದು ವಿವರಿಸಿದರು.
ಮುಂದಿನ ಪೀಳಿಗೆಯ ಮಕ್ಕಳು ಮತ್ತು ಯುವಕರನ್ನು ಓದು, ಬರಹ, ಸಾಹಿತ್ಯದ ಕಡೆಗೆ ಸೆಳೆಯುವ ಕಾರ್ಯ ಇತ್ತೀಚಿನ ದಿನಗಳ ಪ್ರಥಮ ಆದ್ಯತೆಯಾಗಿದೆ. ಮೊಬೈಲ್‌ಗೆ ಸೀಮಿತವಾಗಿರುವ ಮಕ್ಕಳನ್ನು ಸಾಹಿತ್ಯ, ಕಲೆ, ಸಂಗೀತ, ಕೋಲಾಟ ಸೇರಿದಂತೆ ನಾನಾ ಜನಪದ ಕ್ರೀಡೆಗಳ ಕಡೆಗೆ ಗಮನ ಹರಿಸುವಂತೆ ಮಾಡುವ ಉದ್ದೇಶವನ್ನು ಸಾಹಿತ್ಯ ಸಮ್ಮೇಳನ ಹೊಂದಿದೆ. ಈ ಹಿನ್ನೆಲೆಯಲ್ಲಿ ಹೊಳಲ್ಕೆರೆಯಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದರು.
ಇದನ್ನೂ ಓದಿ: ರಾಷ್ಟ್ರಮಟ್ಟದ ಕಬಡ್ಡಿ ತಂಡಕ್ಕೆ ಎಸ್.ಆರ್.ಯಶಸ್ ಆಯ್ಕೆ
ಹೊಳಲ್ಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಶಿವಮೂರ್ತಿ, ಜಿಲ್ಲಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ವಕೀಲ ಪ್ರತಾಪ್ ಜೋಗಿ, ಪದಾಧಿಕಾರಿಗಳಾದ ಹನುಮಂತನಾಯ್ಕ, ಬಿ.ಜಿ.ಹಳ್ಳಿ ವೆಂಕಟೇಶ್, ಜಿ.ಎ.ದೇವರಾಜಯ್ಯ, ಲಕ್ಷ್ಮೀಪತಿ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
